ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸರ್ಕಾರದ ಅನುಮೋದನೆ

Share on facebook
Share on google
Share on twitter
Share on linkedin
Share on print

ಬೆಂಗಳೂರು, ನ. 16: ರಾಜ್ಯ ಸರ್ಕಾರವು ರಾಯಚೂರು ಜಿಲ್ಲೆಯ ಮಸ್ಕಿ ನಾಲಾ ನೀರಾವರಿ ಯೋಜನೆಗೆ ಮತ್ತು ಮರಾಠಾ ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ಸ್ಥಾಪನೆಗೆ  ರಾಜ್ಯ ಸರ್ಕಾರ ಅನುಮೋದನೆ ನೀಡಲು ಆದೇಶಗಳನ್ನು ರವಾನಿಸಲಾಗಿದೆ.

2018 -19 ರಲ್ಲಿ ನಿಗದಿಪಡಿಸಿದಂತೆ ಎಡದಂಡೆ ಹಾಗೂ ಬಲದಂಡೆ ನಾಲೆಗಳು ಮತ್ತು ಅವುಗಳ ಪುನರ್‌ ರಚನೆಗಾಗಿ ಅಂದಾಜು 52.54 ಕೋಟಿ ರೂ.ಗಳ ವೆಚ್ಚದೊಂದಿಗೆ ವಿವರವಾದ ಯೋಜನಾ ವರದಿಗೆ (ಡಿಪಿಆರ್) ಆಡಳಿತಾತ್ಮಕ ಅನುಮತಿ ನೀಡಿದೆ ಎಂದು ಸರ್ಕಾರ ಹೇಳಿದೆ.

ನೀರಾವರಿ ಇಲಾಖೆಯ ಮೂಲಗಳ ಪ್ರಕಾರ, ಈ ಯೋಜನೆಯು ಹೈದರಾಬಾದ್ ಕರ್ನಾಟಕ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಇದು ಅಂತಿಮವಾಗಿ ಸರ್ಕಾರದ ಅನುಮೋದನೆ ಪಡೆದಿದೆ.

ಇದಲ್ಲದೆ 50 ಕೋಟಿ ರೂ.ಗಳ ಅನುದಾನದೊಂದಿಗೆ  ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೂ ಸಹ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶದಂತೆ “ರಾಜ್ಯದಲ್ಲಿ ಗಣನೀಯ ಪ್ರಮಾಣದ ಮರಾಠಿ ಬಾಷಿಗರು ಇರುವ ಕಾರಣದಿಂದ ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಅಭಿವೃದ್ಧಿಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು ಮತ್ತು ಈ ಉದ್ದೇಶಕ್ಕಾಗಿ ಹಣಕಾಸು ಇಲಾಖೆಯ ಒಪ್ಪಿಗೆಯೊಂದಿಗೆ 50 ಕೋಟಿ ರೂ. ಮೀಸಲಾಗಿಡಲಾಗಿದೆ.

ಹಾಲಿ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ 2019 ರಲ್ಲಿ ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಮಸ್ಕಿ ವಿಧಾನಸಭಾ ಕ್ಷೇತ್ರ ಖಾಲಿ ಬಿದ್ದಿತು ಮತ್ತು ಇತರ 15 ಶಾಸಕರು ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟನ್ನು ಹುಟ್ಟುಹಾಕಿದ್ದರು. 

ಸೆಪ್ಟೆಂಬರ್ 24 ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊರೋನಾ ಪರೀಕ್ಷೆಗೊಳಪಟ್ಟ ಹಾಲಿ  ಕಾಂಗ್ರೆಸ್ ಶಾಸಕ ಬಿ ನಾರಾಯಣ್ ರಾವ್ ಅವರ ನಿಧನದ ತರುವಾಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಅಗತ್ಯವಾಗಿತ್ತು. ಉತ್ತರ ಕರ್ನಾಟಕದ ಬೀದರ್ ಜಿಲ್ಲೆಯ ಬಸವಕಲ್ಯಾಣ ಮಹಾರಾಷ್ಟ್ರದ ಗಡಿಯಲ್ಲಿದೆ. ಇದು ಗಣನೀಯಸಂಖ್ಯೆಯಲ್ಲಿ ಮರಾಠಾ ಭಾಷಿಗರನ್ನು ಹೊಂದಿದೆ.

ಎಂಡಿಎ ಸ್ಥಾಪಿಸುವ ನಿರ್ಧಾರವು ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಹಾಗೂ ಸಾ.ರಾ. ಗೋವಿಂದ್ ಅವರುಗಳ ತೀವ್ರ ಟೀಕೆಗೆ ಕಾರಣವಾಗಿದೆ.

Submit Your Article