Mumbai: ಮಹಾರಾಷ್ಟ್ರದಲ್ಲಿ (Maharashtra) ಮರಾಠರಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ನ್ಯಾಶನಲಿಸ್ಟ್ ಕಮ್ಯುನಿಸ್ಟ್ ಪಾರ್ಟಿ (Nationalist Community Party) ಶಾಸಕ ಪ್ರಕಾಶ್ ಸೋಲಂಕೆ ಅವರ ನಿವಾಸವನ್ನು ಮರಾಠಾ ಮೀಸಲಾತಿ ಚಳವಳಿಗಾರರು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.
ಇನ್ನು ಈ ಘಟನೆ ನಡೆದಾಗ ನಾನು ಮನೆಯೊಳಗೇ ಇದ್ದೆ ಎಂದು ಶಾಸಕ ಪ್ರಕಾಶ ಸೋಲಂಕೆ (Prakash Solanke) ಹೇಳಿದ್ದಾರೆ. “ಅದೃಷ್ಟವಶಾತ್, ನನ್ನ ಕುಟುಂಬ ಸದಸ್ಯರು ಅಥವಾ ಸಿಬ್ಬಂದಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ನಾವೆಲ್ಲರೂ ಸುರಕ್ಷಿತವಾಗಿರುತ್ತೇವೆ, ಆದರೆ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ (Maratha)ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಅನೇಕ ಪ್ರತಿಭಟನೆಗಳು ನಡೆಯುತ್ತಿವೆ.
ಮರಾಠಾ ಮೀಸಲಾತಿ ವಿಚಾರವಾಗಿ ಹಿಂಗೋಲಿ ಲೋಕಸಭಾ ಕೇತ್ರದ ಸಂಸದ ಸ್ಥಾನಕ್ಕೆ ಶಿವಸೇನೆ ನಾಯಕ ಹೇಮಂತ್ ಪಾಟೀಲ್ (Hemanth Patil) ರಾಜೀನಾಮೆ ನೀಡುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಯವತ್ಮಾಲ್ನ ಪ್ರತಿಭಟನಾ ಸ್ಥಳದಲ್ಲಿ ಅವರು ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಪ್ರಸ್ತುತ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಮನೋಜ್ ಪಾಟೀಲ್ (Manoj Patil) ಅವರು ಸಂಸದರ ರಾಜೀನಾಮೆಗೆ ಪ್ರತಿಕ್ರಿಯಿಸಿ, ಈ ಸಮಸ್ಯೆಯನ್ನು ಪರಿಹರಿಸಲು ರಾಜ್ಯದ ಎಲ್ಲಾ ಮರಾಠ ಸಂಸದರು ಮತ್ತು ಶಾಸಕರು ವಿಶೇಷ ವಿಧಾನಸಭೆ ಅಧಿವೇಶನವನ್ನು ಕರೆಯಬೇಕು ಎಂದು ಸಲಹೆ ನೀಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು “ಮರಾಠರ ಪ್ರಗತಿಯನ್ನು ತಡೆಯಲು ಪಿತೂರಿ ನಡೆಸುತ್ತಿದ್ದಾರೆ” ಎಂದು ಮನೋಜ್ ಪಾಟೀಲ್ ಈ ಹಿಂದೆ ಹೇಳಿದ್ದರು. ಏತನ್ಮಧ್ಯೆ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Ekanath Shinde) ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮರಾಠ ಸಮುದಾಯಕ್ಕೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. ರಾಜ್ಯ ಸರ್ಕಾರವು ಅವರ ಹಕ್ಕುಗಳನ್ನು ಅವರಿಗೆ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಮಹಾರಾಷ್ಟ್ರ ಸರ್ಕಾರವು ಶೀಘ್ರದಲ್ಲೇ ಮರಾಠ ಮೀಸಲಾತಿ ಬಗ್ಗೆ “ಶಾಶ್ವತ ನಿರ್ಧಾರ” ತೆಗೆದುಕೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದ್ದರೆ, ಮರಾಠಾ ಸಮುದಾಯಕ್ಕೆ ಅವರ ಹಕ್ಕುಗಳನ್ನು ನೀಡಲಾಗುವುದು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಿಎಂ ಶಿಂಧೆ ಹೇಳಿದ್ದಾರೆ.