ನವದೆಹಲಿ ಡಿ 16 : ಹೆಣ್ಣುಮಕ್ಕಳ ವಿವಾಹದ ಮಿತಿಯನ್ನು 18ರಿಂದ 21ಕ್ಕೆ ಹೆಚ್ಚಿಸಲು ಸಂಪುಟದಲ್ಲಿ ಅನುಮೋದನೆ ದೊರೆತಿದೆ.
ದೇಶದ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಂದರೆ 2020ರ ಆಗಸ್ಟ್ 15ರಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವಾಗ ಈ ವಿಚಾರವನ್ನು ಪ್ರಸ್ತಾಪಸಿದ್ದರು
ಹೆಣ್ಣುಮಕ್ಕಳ ಆರೋಗ್ಯದ ವಿಚಾರವಾಗಿ ಸರ್ಕಾರ ಬದ್ಧವಾಗಿದೆ. ಅಪೌಷ್ಟಿಕತೆಯಿಂದ ಹೆಣ್ಣುಮಕ್ಕಳನ್ನು ರಕ್ಷಿಸುವುದು ಸರ್ಕಾರದ ಉದ್ದೇಶ. ಅವರು ಸರಿಯಾದ ವಯಸ್ಸಿನಲ್ಲಿ ವಿವಾಹವಾಗುವುದು ಸೂಕ್ತ ಎಂದು ಪ್ರಧಾನಿ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ.
ಸದ್ಯ ಇರುವ ಕಾನೂನಿನ ಪ್ರಕಾರ, ನಿಗದಿಪಡಿಸಲಾಗಿರುವ ವಿವಾಹದ ವಯಸ್ಸು ಗಂಡುಮಕ್ಕಳಿಗೆ 21 ಹಾಗೂ ಹೆಣ್ಣುಮಕ್ಕಳಿಗೆ 18 ವರ್ಷ. ಈ ಹಿನ್ನೆಲೆಯಲ್ಲಿ ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಾಲ್ಯವಿವಾಹ ನಿಷೇಧ ಕಾಯಿದೆ, ವಿಶೇಷ ವಿವಾಹ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಗಳಲ್ಲಿ ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ