• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ
0
SHARES
5
VIEWS
Share on FacebookShare on Twitter

ಒರೇಕಲ್‌ನಲ್ಲಿ ಭಾರೀ (Massive layoff at Oracle) ಉದ್ಯೋಗ ಕಡಿತ

ಮುನ್ಸೂಚನೆ ಇಲ್ಲದೆ ಲೇಆಫ್ ಮಾಡಿದ ಒರೇಕಲ್ ವಿರುದ್ಧ ಉದ್ಯೋಗಿಗಳ ಅಸಮಾಧಾನ

ಹಲವು ವರ್ಷ ಸೇವೆ ಮಾಡಿದರೂ ಕೆಲಸ ಕಳೆದುಕೊಂಡ ಉದ್ಯೋಗಿಗಳು

ವಿಶ್ವದ ಪ್ರಮುಖ ಸಾಫ್ಟ್‌ವೇರ್ ಕಂಪನಿಗಳಲ್ಲಿ ಒಂದಾದ ಒರೇಕಲ್ ಸಂಸ್ಥೆ ತನ್ನ (Massive layoff at Oracle) ಉದ್ಯೋಗಿಗಳ ಸಂಖ್ಯೆಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿದೆ.

ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಹೇಳಲಾಗುತ್ತಿದ್ದು, ಭಾರತದಲ್ಲೇ ಸುಮಾರು 12,000 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

Massive layoff at Oracle

ಈ ಘಟನೆ ಐಟಿ ಕ್ಷೇತ್ರದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಆದರೆ, ಈ ಕುರಿತು ಒರೇಕಲ್ (Oracle) ಸಂಸ್ಥೆಯಿಂದ (Massive layoff at Oracle) ಅಧಿಕೃತ ಪ್ರಕಟಣೆ ಇನ್ನೂ ಹೊರಬಂದಿಲ್ಲ ಎಂಬುದು ಗಮನಾರ್ಹ ವಿಷಯವಾಗಿದೆ.

ಸಾಮಾಜಿಕ ಜಾಲತಾಣಗಳು ಮತ್ತು ಉದ್ಯೋಗಿಗಳ ಆನ್‌ಲೈನ್ ವೇದಿಕೆಗಳ ಮೂಲಕ ಈ ಲೇಆಫ್ (Layoff) ವಿಷಯ ಬಹಿರಂಗವಾಗಿದೆ ಎಂದು ತಿಳಿದುಬಂದಿದೆ.

ಹಲವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ಯಾವುದೇ ಮುನ್ಸೂಚನೆ ಇಲ್ಲದೇ ರಾತ್ರೋರಾತ್ರಿ ಕೆಲಸ ಕಳೆದುಕೊಂಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಸಾಮಾನ್ಯವಾಗಿ ಕಂಪನಿಗಳು ಉದ್ಯೋಗ ಕಡಿತ ಮಾಡುವಾಗ ಮುಂಚಿತವಾಗಿ ಸೂಚನೆ ನೀಡುವುದು ರೂಢಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಫೋನ್ ಕರೆ,

ಸಭೆ ಅಥವಾ ವೈಯಕ್ತಿಕ ಮಾಹಿತಿ ನೀಡದೇ, ಕೇವಲ ಇಮೇಲ್ ಮೂಲಕ ಲೇಆಫ್ ನೋಟಿಸ್ (Notice) ಕಳುಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕೆಲವು ಉದ್ಯೋಗಿಗಳ ಅನುಭವಗಳು ತುಂಬಾ ಭಾವನಾತ್ಮಕವಾಗಿವೆ. ಕೆಲವರು 20 ವರ್ಷಕ್ಕಿಂತ ಹೆಚ್ಚು ಕಾಲ ಕಂಪನಿಯಲ್ಲಿ ಕೆಲಸ ಮಾಡಿದರೂ ಕೂಡ ಅವರಿಗೆ

ಯಾವುದೇ ಗೌರವ ಅಥವಾ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ಕೆಲವರು ನಿವೃತ್ತಿಗೆ ಕೆಲವೇ ವರ್ಷ ಬಾಕಿ ಇದ್ದರೂ ಕೆಲಸ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ರೀತಿಯ ಘಟನೆಗಳು ಉದ್ಯೋಗ ಭದ್ರತೆ ಬಗ್ಗೆ ಐಟಿ

ಉದ್ಯೋಗಿಗಳಲ್ಲಿ ಆತಂಕವನ್ನು ಉಂಟುಮಾಡಿದೆ.

ಭಾರತದಲ್ಲಿರುವ ಒರೇಕಲ್ ಇಂಡಿಯಾ ಡೆವಲಪ್ಮೆಂಟ್ ಸೆಂಟರ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಡಿತ ನಡೆದಿದೆ ಎಂದು ಹೇಳಲಾಗುತ್ತಿದೆ.

ವಿಶೇಷವಾಗಿ ಇಂಟರ್ನಲ್ ತಂಡಗಳಲ್ಲಿ ಹೆಚ್ಚಿನ ಕತ್ತರಿ ಬಿದ್ದಿದೆ. ಲೇಆಫ್ ಮಾಡಿದ ತಕ್ಷಣವೇ ಉದ್ಯೋಗಿಗಳ ಸ್ಲ್ಯಾಕ್, ವಿಪಿಎನ್, ಇಮೇಲ್ ಮುಂತಾದ ಎಲ್ಲಾ

ಆಫೀಸ್ ಪ್ರವೇಶಗಳನ್ನು ನಿಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದರಿಂದ ಉದ್ಯೋಗಿಗಳು ತಕ್ಷಣವೇ ಕೆಲಸದಿಂದ ಬಿಡುಗಡೆಗೊಂಡಂತೆ ಆಗಿದೆ. ಈ ಕ್ರಮ ಐಟಿ ಕ್ಷೇತ್ರದಲ್ಲಿ ಹೊಸ ರೀತಿಯ ಲೇಆಫ್ ವಿಧಾನ ಎಂದು ಹೇಳಲಾಗುತ್ತಿದೆ.

ಲೇಆಫ್ ಆದ ಉದ್ಯೋಗಿಗಳಿಗೆ ಕಂಪನಿ ಪರಿಹಾರವಾಗಿ ಕೆಲವು ತಿಂಗಳ ವೇತನ ನೀಡಲಾಗುತ್ತದೆ ಎಂದು ಹೇಳಲಾಗಿದೆ. “ಎನ್ + 2” ಸೂತ್ರದ ಪ್ರಕಾರ ಪರಿಹಾರ ನೀಡಲಾಗುತ್ತದೆ.

ಇಲ್ಲಿ “ಎನ್” ಎಂದರೆ ಉದ್ಯೋಗಿ ಕೆಲಸ ಮಾಡಿದ ವರ್ಷಗಳ ಸಂಖ್ಯೆ. ಅದರ ಜೊತೆಗೆ ನೋಟಿಸ್ ಪೇ ಮತ್ತು ಇತರ ಸೌಲಭ್ಯಗಳನ್ನು ಕೂಡ ನೀಡಲಾಗುತ್ತದೆ ಎಂದು ಮಾಹಿತಿ

ಲಭ್ಯವಾಗಿದೆ. ಆದರೂ, ರಾತ್ರೋರಾತ್ರಿ ಕೆಲಸ ಕಳೆದುಕೊಳ್ಳುವುದು ಉದ್ಯೋಗಿಗಳಿಗೆ ದೊಡ್ಡ ಆಘಾತವಾಗಿದ್ದು, ಐಟಿ ಕ್ಷೇತ್ರದಲ್ಲಿ ಉದ್ಯೋಗ ಭದ್ರತೆ ಕುರಿತು ಮತ್ತೆ ಚರ್ಚೆ ಶುರುವಾಗಿದೆ.

ಇದನ್ನು ಓದಿ : https://vijayatimes.com/high-court-orders-to-whatsapp-notices/

Tags: CompanyEmployeejobslayofforacle

Related News

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್

April 16, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.