ಬೆಂಗಳೂರು, ಜ. 07: ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ಮುಹೂರ್ತ ಫಿಕ್ಸ್ ಆಗಿದ್ದು, ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೋಧನೆ ಮತ್ತು ಕಲಿಕೆಗಾಗಿ ಗುರುತಿಸಿರುವ ವಿಷಯಗಳನ್ನು ಅಂತಿಮಗೊಳಿಸಲಾಗುವುದು. ಈ ವಿವರಗಳನ್ನು ಎಲ್ಲಾ ಶಾಲೆಗಳಿಗೆ ಶೀಘ್ರವೇ ಕಳುಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ಅಂತೂ ಇಂತೂ ಕೊರೊನಾ ಭೀತಿಯ ನಡುವೆ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಸಮಯ ಕೂಡ ನಿಗಧಿಯಾಗಿದೆ. ಇದರಿಂದ ವಿದ್ಯಾರ್ಥಿಗಳು ಇರುವ ಕಡಿಮೆ ಅವಧಿಯಲ್ಲಿ ಹೆಚ್ಚು ಗಮನವಿಟ್ಟು ಕಲಿಯಬೇಕಾಗಿದೆ.