ವಿಪಕ್ಷಗಳ 2ನೇ ಸಭೆಗೆ ಬೆಂಗಳೂರು ಸಜ್ಜು ; ಚುನಾವಣಾ ತಂತ್ರದ ಬಗ್ಗೆ ಚರ್ಚೆ ಸಾಧ್ಯತೆ

Bengaluru: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟವನ್ನು (meeting with opposition parties) ಕಟ್ಟುವ ನಿಟ್ಟಿನಲ್ಲಿ ವಿಪಕ್ಷಗಳ 2ನೇ ಸಭೆ ಇಂದು ಬೆಂಗಳೂರಿನಲ್ಲಿ

ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರೊಂದಿಗೆ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ

ಸಭೆಯ ಸಿದ್ಧತೆಗಳನ್ನು ಪರಿಶೀಲಿಸಿದರು.2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ಕನಿಷ್ಠ 24 ವಿರೋಧ ಪಕ್ಷಗಳು

ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಸಭೆಗೆ ಒಟ್ಟಿಗೆ (meeting with opposition parties) ಸೇರಲಿವೆ.

ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ಮೊದಲ ಸಭೆ ನಡೆದಿದ್ದು, 15 ರಾಜಕೀಯ ಪಕ್ಷಗಳ 32 ವಿರೋಧ ಪಕ್ಷದ ನಾಯಕರು ಈ ಸಭೆಗೆ ಹಾಜರಾಗಿದ್ದರು.

ಈ ಸಭೆಯನ್ನು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ನಲ್ಲಿ ಹೊಟೇಲ್ನಲ್ಲಿ ನಿಗದಿಪಡಿಸಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ವಿವಿಧ ರಾಜ್ಯ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಆಹ್ವಾನಿಸಿ

ಪತ್ರಗಳನ್ನು ಕಳುಹಿಸಿದ್ದಾರೆ. ನಮ್ಮ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಧಕ್ಕೆ ತರುವ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನಿಂದ

ಹೋರಾಡುವ ಬಗ್ಗೆ ಸರ್ವಾನುಮತದ ಒಪ್ಪಂದಕ್ಕೆ ಬಂದಿದ್ದರಿಂದ ಸಭೆಯು ಉತ್ತಮ ಯಶಸ್ಸನ್ನು ಕಂಡಿದೆ ಎಂದು ಖರ್ಗೆ ತಮ್ಮ ಆಮಂತ್ರಣ ಪತ್ರದಲ್ಲಿ ತಿಳಿಸಿದ್ದಾರೆ. ಇನ್ನ ಕಾಂಗ್ರೆಸ್ ಮಾಜಿ ಅಧ್ಯಕ್ಷೆ

ಸೋನಿಯಾ ಗಾಂಧಿ ಅವರು ಇಂದು ನಡೆಯಲಿರುವ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪ್ರಾದೇಶಿಕ ಪಕ್ಷಗಳು ನಡೆಯುತ್ತಿರುವ ಎರಡನೇ ಸಭೆ ಇದಾಗಿದೆ. ಸಭೆಯಲ್ಲಿ ವಿವಿಧ ಪಕ್ಷಗಳ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಕನಿಷ್ಠ 20 ಪಕ್ಷಗಳ ನಾಯಕರು ರಾಜ್ಯಕ್ಕೆ ಬಂದು ಒಗ್ಗಟ್ಟು

ಪ್ರದರ್ಶಿಸಲಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ. ಕೇಂದ್ರದಲ್ಲಿ ಬಲವಾದ ಮತ್ತು ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕೆಂದು ನಾವು ಭಾವಿಸುತ್ತೇವೆ. 2024ರ ಲೋಕಸಭೆ ಚುನಾವಣೆಗೆ ಮುನ್ನ

ಬಿಜೆಪಿ ವಿರುದ್ಧ ಐಕ್ಯರಂಗವನ್ನು ಪ್ರಸ್ತುತಪಡಿಸುವ ವಿರೋಧ ಪಕ್ಷಗಳ ಪ್ರಯತ್ನಗಳಿಗೆ ಎಂಟು ಹೊಸ ಪಕ್ಷಗಳು ತಮ್ಮ ಬೆಂಬಲವನ್ನು ನೀಡಿವೆ ಎಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಜನತಾ ದಳ (ಯುನೈಟೆಡ್) ಆಯೋಜಿಸಿದ್ದ ಪಾಟ್ನಾ ಸಭೆಯಲ್ಲಿ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಜನತಾ ದಳ (ಆರ್ಜೆಡಿ), ನ್ಯಾಶನಲಿಸ್ಟ್ ಕಾಂಗ್ರೆಸ್

ಪಾರ್ಟಿ (ಎನ್ಸಿಪಿ), ಆಮ್ ಆದ್ಮಿ ಪಾರ್ಟಿ (ಎಎಪಿ) ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಅಥವಾ ಸಿಪಿಐ(ಎಂ), ಸಿಪಿಐ, ಸಿಪಿಐ-ಎಂಎಲ್ (ಎಲ್), ಸಮಾಜವಾದಿ ಪಕ್ಷ, ನ್ಯಾಷನಲ್

ಕಾನ್ಫರೆನ್ಸ್, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಶಿವಸೇನೆ (ಯುಬಿಟಿ) ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷಹಳು ಭಾಗಿಯಾಗಿದ್ದವು. ಕರ್ನಾಟಕದ ಪ್ರಾದೇಶಿಕ ಪಕ್ಷ

ಜೆಡಿಎಸ್ ಈ ಮೈತ್ರಿಕೂಟದಿಂದ ಅಂತರ ಕಾಯ್ದುಕೊಂಡಿದೆ.

Exit mobile version