ಶಿವಣ್ಣನಿಗೆ ನಾಯಕಿಯಾದ ತೆಲುಗಿನ ಬೆಡಗಿ

ತೆಲುಗು – ತಮಿಳು ಚಿತ್ರರಂಗದ ಖ್ಯಾತ ನಟಿ, ಬೆಡಗಿ ಮೆಹ್ರೀನ್ ಪಿರ್ಜಾಡಾ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ 124 ನೇ ಚಿತ್ರದ ನಾಯಕಿಯಾಗಿ ಅಭಿನಯಿಸಲಿದ್ದಾರೆ. F2 ಹಾಗೂ ಪಟಾಸ್ ಚಿತ್ರಗಳ ಮೂಲಕ ಜನಮನಸೂರೆಗೊಂಡಿರುವ ಮೆಹ್ರೀನ್, ಸದ್ಯ ಅನಿಲ್ ರವಿಪುಡಿ ಅವರ F3 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.
ಚಿತ್ರದ ಕಥೆ ಇಷ್ಟಪಟ್ಟಿರುವ ಮೆಹ್ರೀನ್, ತಾವು ಈ ಚಿತ್ರದಲ್ಲಿ ನಟಿಸುವುದಾಗಿ ಹೇಳಿದಾರಂತೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ .
ರಾಮ್ ದುಲಿಪುಡಿ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭವಾಗಲಿದೆ.

ಖ್ಯಾತ ನಟರಾದ ನಾಜರ್ , ಸಂಪತ್ ಹಾಗೂ ಮಂಗ್ಲಿ(ಗಾಯಕಿ) ಸಹ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕಡ್ಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Latest News

ದೇಶ-ವಿದೇಶ

‘ಹರ್ ಘರ್ ತಿರಂಗ’; 10 ದಿನಗಳಲ್ಲಿ 1 ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ!

10 ದಿನಗಳ ಅಲ್ಪಾವಧಿಯಲ್ಲಿ, ಭಾರತ ಅಂಚೆ ಇಲಾಖೆ 1 ಕೋಟಿಗೂ ಹೆಚ್ಚು ರಾಷ್ಟ್ರೀಯ ಧ್ವಜಗಳನ್ನು ಮಾರಾಟ ಮಾಡಿದೆ. ಈ ಧ್ವಜಗಳು, ಅಂಚೆ ಕಚೇರಿಗಳು ಮತ್ತು ಆನ್ಲೈನ್ ಮೂಲಕ ನಾಗರಿಕರಿಗೆ ತಲುಪಿವೆ.

ರಾಜಕೀಯ

“ಕಾಂಗ್ರೆಸ್ ಬಸ್‍ಗೆ ಎರಡು ಸ್ಟೇರಿಂಗ್” : ಸಚಿವ ಡಾ. ಸುಧಾಕರ್

“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್‍ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್‍ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.