Visit Channel

ಮೇಕೆದಾಟು ಯೋಜನೆ ವಿಚಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಮಾಜಿ ‌ಸಿಎಂ ಎಚ್ಡಿಕೆ ಕಿಡಿ

vijaya-karnataka

ಬೆಂಗಳೂರು, ಜು. 20: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮೇಕೆದಾಟು ಯೋಜನೆ ಜಾರಿ ಶತಸಿದ್ಧ ಎನ್ನುವ ಮೂಲಕ ಸರ್ಕಾರ ಕನ್ನಡಿಗರ ಮೂಗಿಗೆ ತುಪ್ಪಾ ಸರಿಯುತ್ತಿದೆ ಎಂದು ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಆರಂಭವಾಗದು’ ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ ಕೊಟ್ಟಿರುವುದಾಗಿ ತಮಿಳುನಾಡು ಸಿಎಂ ಸ್ಟಾಲಿನ್ ಹೇಳಿದ್ದಾರೆ. ಹಾಗಿದ್ದರೆ, ಯೋಜನೆ ವಿಚಾರದಲ್ಲಿ ಕೇಂದ್ರವು ಕರ್ನಾಟಕಕ್ಕೆ ಅಭಯ ನೀಡಿದೆ ಎಂಬ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ? ಕೇಂದ್ರ–ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ? ಎಂದು ಪ್ರಶ್ನಿಸಿದ್ದಾರೆ.

ಮೇಕೆದಾಟು ವಿಚಾರದಲ್ಲಿ ರಾಜ್ಯ ಸರ್ಕಾರ ಬಿಜೆಪಿ ಹೈಕಮಾಂಡ್‌ ಹೇಳಿದಂತೆ ಕೇಳುತ್ತಿದೆ. ಬಿಜೆಪಿ ಯೋಜನೆಯ ವಿರುದ್ಧವಿದೆ. ಯೋಜನೆ ತಡೆಯಲು ತಮಿಳುನಾಡು ನಡೆಸುತ್ತಿರುವ ಸಾಂಘಿಕ ಹೋರಾಟದಂತೆ, ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿಲ್ಲ. ಆದರೆ, ‘ಯೋಜನೆ ಜಾರಿ ಶತಸಿದ್ಧ’ ಎನ್ನುವ ಮೂಲಕ ಕನ್ನಡಿಗರ ಮೂಗಿಗೆ ತುಪ್ಪ ಸವರುತ್ತಿದೆ.

ಮೇಕೆದಾಟಿನ ಡ್ಯಾಂನಿಂದ ತಮಿಳುನಾಡಿಗೆ ಯಾವ ನಷ್ಟವೂ ಇಲ್ಲ. ಆದರೂ ಡ್ಯಾಂ ನಿರ್ಮಾಣ ಆಗದಂತೆ ತಡೆಯಲು ಶತಪ್ರಯತ್ನ ಮಾಡುತ್ತಿದೆ. ಸರ್ವಪಕ್ಷ ಸಭೆ ಮಾಡಿ ಮುಂದಿನ ಕಾರ್ಯತಂತ್ರ ರೂಪಿಸಿದೆ, ಪ್ರಧಾನಿ, ಸಚಿವರ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ದು ಒತ್ತಡ ಹಾಕಿದೆ. ಆದರೆ, ಯೋಜನೆಯಿಂದ ಅನುಕೂಲ ಪಡೆಯಲಿರುವ ರಾಜ್ಯ ಸರ್ಕಾರ ಈವರೆಗೆ ಏನೇನು ಮಾಡಿದೆ?

ಹೆಚ್ಚುವರಿ ನೀರಿನ ಮೇಲೆ ಕಣ್ಣಿಟ್ಟು ತಮಿಳುನಾಡು 6 ತಿಂಗಳ ಹಿಂದೆ ನದಿ ಜೋಡಣೆ ಆರಂಭಿಸಿತು. ತಮಿಳುನಾಡಿನ ಈ ಯೋಜನೆ ವಿರುದ್ಧ ಕರ್ನಾಟಕ ಆಕ್ಷೇಪಣೆ ಸಲ್ಲಿಸಿದ್ದು ಮಾತ್ರ ನೆನ್ನೆ.ಈ ಹೆಚ್ಚುವರಿ ನೀರು ಈಗ ಡ್ಯಾಂ ನಿರ್ಮಾಣಕ್ಕೆ ತೊಡಕಾಗಿದೆ. ಇದರ ಆಧಾರದಲ್ಲಿ ರೂಪಿತವಾದ ನದಿ ಜೋಡಣೆ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ವಿಳಂಬ ಮಾಡಿತ್ತು. ಯೋಜನೆ ವಿಚಾರದಲ್ಲಿ ಸರ್ಕಾರ ತನ್ನಿಷ್ಟದಂತೆ ನಡೆದುಕೊಳ್ಳುವ ಬದಲು ಎಲ್ಲರ ಅಭಿಪ್ರಾಯ ಸಂಗ್ರಹಿಸಲಿ. ಆ ಮೂಲಕ ಈ ಯೋಜನೆ ದಕ್ಕಿಸಿಕೊಳ್ಳಲು ಸಾಂಘಿಕವಾಗಿ ಹೋರಾಟ ನಡೆಸಬೇಕು. ಇಲ್ಲವಾದರೆ ಕಾವೇರಿ ನೀರಿನ ವ್ಯಾಜ್ಯದಂತೇ, ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವುದೂ ಒಂದು ವ್ಯಾಜ್ಯವಾಗಿ ಉಳಿದು ಹೋಗಲಿದೆ ಎಂದಿದ್ದಾರೆ.

ಇನ್ನೂ ರಾಜ್ಯದ ಜನರು ಗಮನಸಿಬೇಕಾಗದ ಒಂದು ಸಂಗತಿ ಇದೆ. ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಅನುಮೋದನೆ ಸಿಕ್ಕಿದ್ದು ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ. ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಲ್ಲ. ಅನುಮೋದನೆ ಸಿಕ್ಕ ಯೋಜನೆಗೆ ವಿವಿಧ ಇಲಾಖೆಗಳ ಅನುಮತಿ ಬೇಕು. ರಾಷ್ಟ್ರೀಯ ಪಕ್ಷವಿದ್ದರು ಅನುಮತಿ ಸಿಗುತ್ತಿಲ್ಲ. ಕರ್ನಾಟಕದಲ್ಲಿ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುವ ತವಕ. ಹೀಗಾಗಿ ಬಿಜೆಪಿ ತಮಿಳುನಾಡಿನ ಹಿತಾಸಕ್ತಿ ಕಾಯುತ್ತಿದೆ. ಯೋಜನೆ ತಡೆಯುವ ಪ್ರಯತ್ನದ ವಿರುದ್ಧ ಹೋರಾಡಬೇಕಿದ್ದ ಕಾಂಗ್ರೆಸ್‌ ತಮಿಳುನಾಡು ಸರ್ಕಾರದ ಪಾಲುದಾರ ಪಕ್ಷ. ಹೀಗಾಗಿ ಜೆಡಿಎಸ್‌ ಒಂದೇ ಈಗ ಮೇಕೆದಾಟು ಯೋಜನೆಗೆ ಪರಿಹಾರ ಎಂದಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.