INDIA ಮೈತ್ರಿಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ

Bengaluru: ಲೋಕಸಭಾ ಚುನಾವಣೆಗೆ (Lok Sabha Election) ಪ್ರಣಾಳಿಕೆ ಬಿಡುಗಡೆ ಮಾಡಿರುವ ತಮಿಳುನಾಡಿನ (Mekedatu Project-DMK Manifesto) ಆಡಳಿತರೂಢ ದ್ರಾವಿಡ ಮುನ್ನೇತ್ರ

ಕಳಗಂ (ಡಿಎಂಕೆ) ಪಕ್ಷ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಕರ್ನಾಟಕ ಸರ್ಕಾರ (Karnataka Government) ನಿರ್ಮಿಸಲು ಮುಂದಾಗಿರುವ ಮೇಕೆದಾಟು ಯೋಜನೆಗೆ ತಡೆ

ನೀಡುವುದಾಗಿ ಘೋಷಣೆ ಮಾಡಿದೆ. ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಈ ಘೋಷಣೆ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.

ಇಂಡಿಯಾ ಮೈತ್ರಿಕೂಟದ (I.N.D.I.A Alliance) ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿದೆ. ಕಳೆದ ವಿಧಾನಸಭಾ ಚುನಾವಣೆಗೆ ಮೊದಲು ಡಿಕೆ ಶಿವಕುಮಾರ್ ನೇತೃತ್ವದಲ್ಲಿ

ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿತ್ತು. ಆದರೆ ಇದೀಗ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ (DMK) ಈ ವಿಚಾರವನ್ನೇ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಮೈತ್ರಿಕೂಟದಲ್ಲಿ

ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. ಈ ಕುರಿತು ಕರ್ನಾಟಕದ ಕಾಂಗ್ರೆಸ್ (Mekedatu Project-DMK Manifesto) ಸರ್ಕಾರ ಇನ್ನು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಡಿಎಂಕೆ ಪ್ರಣಾಳಿಕೆಯಲ್ಲಿ ಏನಿದೆ..?
• ಕರ್ನಾಟಕದ ಮೇಕೆದಾಟು (Mekedatu) ಅಣೆಕಟ್ಟು ಯೋಜನೆ ರದ್ದುಗೊಳಿಸುವುದು
• ರಾಜ್ಯಪಾಲರಿಗೆ ಅಧಿಕಾರ ನೀಡುವ 361ನೇ ವಿಧಿಯನ್ನು ರದ್ದು
• ರಾಜ್ಯಪಾಲರನ್ನು ನೇಮಿಸುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡುವುದು.
• ರಾಜ್ಯಗಳಿಗೆ ಫೆಡರಲ್ ಹಕ್ಕು (Federal Rights) ಗಳನ್ನು ಒದಗಿಸಲು ಭಾರತೀಯ ಸಂವಿಧಾನವನ್ನು ಬದಲಾವಣೆ ಮಾಡಬೇಕು.
• ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯಲಾಗುವುದು

• ಭಾರತದಾದ್ಯಂತ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ.
• ಎಲ್ಲಾ ಹೆದ್ದಾರಿಗಳಲ್ಲಿರುವ ಟೋಲ್ ಗೇಟ್ ರದ್ದು
• ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತೆಗೆದುಹಾಕಲಾಗುತ್ತದೆ.
• ಮಹಿಳೆಯರಿಗೆ 33% ಮೀಸಲಾತಿ ಜಾರಿ
• ಸರ್ಕಾರಿ ಶಾಲೆಗಳಿಗೆ ಬೆಳಗಿನ ಉಪಾಹಾರ ಯೋಜನೆ
NEET ನಿಷೇಧ ಮಾಡಲಾಗುವುದು
• ಚೆನ್ನೈನಲ್ಲಿ ಸುಪ್ರೀಂಕೋರ್ಟ್ (Supreme Court) ಪೀಠ ಸ್ಥಾಪನೆ ಮಾಡಲಾಗುವುದು
• ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡುವುದು

ಇದನ್ನು ಓದಿ: ಮಂಗಳೂರಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮರಳುಗಾರಿಕೆ ಅಕ್ರಮದ ಕುರಿತು ಹೊಸ ಬಾಂಬ್ ಸಿಡಿಸಿದ ಶಾಸಕ ವೇಧವ್ಯಾಸ ಕಾಮತ್ 

Exit mobile version