ಬೆಂಗಳೂರು ಮೆಟ್ರೋ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು ಅ 1 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 27 ಅಕ್ಟೋಬರ್ 2021 ಕೊನೆಯ ದಿನವಾಗಿದೆ. ಬಿಎಂಆರ್‌ಸಿಎಲ್ ಡೆಪ್ಯೂಟಿ ಜನರಲ್ ಮ್ಯಾನೇಜರ್ 3, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು ವೇತನ ಶ್ರೇಣಿ 65000 125000 ಪ್ರತಿ ತಿಂಗಳು, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ವಾಣಿಜ್ಯ ವಿಷಯದಲ್ಲಿ ಪದವಿ, ಸಿಐ, ಸಿಎಂಎ ಪದವಿಯನ್ನು ಪಡೆದಿರಬೇಕು. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್‌ ಹುದ್ದೆಗೆ ವಾಣಿಜ್ಯ ವಿಷಯದಲ್ಲಿ ಪದವಿ, ಎಂಬಿಎ, ಎಂಕಾಂ, ಸಿಎ-ಇಂಟ‌, ಸಿಎಂವಿ ಇಂಟರ್ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ 50 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ವಯೋಮಿತಿ 45 ವರ್ಷಗಳು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಮಾಸಿಕ 125000 ರೂ ಮಾಸಿಕ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ 85000 ರೂ. ಮಾಸಿಕ ವೇತನ ನಿಗದಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು bmrc.co.in ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Exit mobile version