• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಈಗ ರಾಜ್ಯಪಾಲರ ಅಂಗಳದಲ್ಲಿ : 10 ವರ್ಷ ಜೈಲು ಶಿಕ್ಷೆ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಈಗ ರಾಜ್ಯಪಾಲರ ಅಂಗಳದಲ್ಲಿ : 10 ವರ್ಷ ಜೈಲು ಶಿಕ್ಷೆ
0
SHARES
19
VIEWS
Share on FacebookShare on Twitter

Bengaluru: ಹಿಂದಿನ ಕಾಲದಲ್ಲಿ ಹಾಸಿಗೆ ಇದ್ದಷ್ಟು ಕಾಲು ಚಾಚು ಅನ್ನುತ್ತಿದ್ದರು.ಸಾಲವನ್ನು ಕೊಂಬಾಗ ಹಾಲುಂಡಂತೆ, ಸಾಲಿಗರು ವಾಪಸ್ ಕೇಳಿದಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ ಅನ್ನೋ ಮಾತು ಸುಳ್ಳಲ್ಲ. ಬಡ್ಡಿ ದಂಧೆ ಕಾಲದಲ್ಲಿ ಸಾಲ ಅಂದ್ರೆ ಶೂಲ ಎನ್ನುವಂತಾಗಿದೆ. ಮೈಕ್ರೋ ಮನೆಹಾಳರ ಕಾಟಕ್ಕೆ ಅದೆಷ್ಟೋ ಜೀವಗಳು ಹೋಗ್ತಿವೆ. ಇದಕ್ಕೆ ಸರ್ಕಾರ (Govt) ಅಲರ್ಟ್ ಆಗಿದ್ದು ಸುಗ್ರಿವಾಜ್ಞೆ ಮೂಲಕ ಎಲ್ಲದಕ್ಕೂ ಬ್ರೇಕ್ ಹಾಕಲು ಮುಂದಾಗಿದೆ. ಈಗಾಗಲೇ ಇದು ರಾಜ್ಯಪಾಲರ (Governor) ಅಂಗಳವನ್ನೂ ತಲುಪಿದೆ.ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಾಟಕ್ಕೆ ನಿನ್ನೆಯಷ್ಟೇ ಮೂರು ಜನರ ಜೀವ ಹೋಗಿದೆ. ಈ ಫೈನಾನ್ಸ್​ ಸಿಬ್ಬಂದಿ ಎಂಬ ಯಮಕಿಂಕರರ ಅಟ್ಟಹಾಸಕ್ಕೆ 18 ಜನ ಇಹಲೋಕದ ಸಹವಾಸವೇ ಬೇಡವೆಂದು ಯಮಲೋಕದ ಯಾತ್ರೆ ಬೆಳೆಸಿದ್ದೂ ಆಗಿದೆ.

ಇನ್ನು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ (Micro Finance) ಸಿಬ್ಬಂದಿಯ ಕಿರುಕುಳ ಹೆಚ್ಚಾಗ್ತಿದ್ದಂತೆ ಸರ್ಕಾರ ಅಲರ್ಟ್ ಆಗಿದೆ. ಬಲವಂತವಾಗಿ ಸಾಲ ವಸೂಲಿ ಮಾಡುವವರ ವಿರುದ್ಧ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದ್ದು ಕರಡು ಪ್ರತಿ (Draft copy) ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ಸಿಎಂ ಕಚೇರಿ ಸಿಬ್ಬಂದಿ ರಾಜಭವನಕ್ಕೆ ಕಡತ ಸಲ್ಲಿಸಿದ್ದಾರೆ. ಒಂದೆರಡು ದಿನದಲ್ಲಿ ಕಡತಕ್ಕೆ ರಾಜ್ಯಪಾಲರು (Governor) ಅಂಗೀಕಾರ ಹಾಕುವ ಸಾಧ್ಯತೆ ಇದೆ.

ಸುಗ್ರೀವಾಜ್ಞೆಯಲ್ಲಿ ಏನಿದೆ?

  • ಸಾಲ ವಸೂಲಿ ವೇಳೆ ಸಾಲಗಾರರಿಗೆ ಹಿಂಸೆ, ಹಲ್ಲೆ, ಅವಮಾನ ನಿಷೇಧ
  • ಬಲವಂತವಾಗಿ ಸ್ಥಿರಾಸ್ತಿ, ದಾಖಲೆ ಕಸಿದು ದಬ್ಬಾಳಿಕೆ, ದೌರ್ಜನ್ಯ ಎಸಗುವಂತಿಲ್ಲ
  • ಗೂಂಡಾಗಳ ಬಳಕೆ, ಮನೆಗೆ ಭೇಟಿ, ಬೆದರಿಕೆ ಹಾಕುವುದು ಗಂಭೀರ ಅಪರಾಧ
  • ಸಾಲಗಾರರ ದೈನಂದಿನ ಕೆಲಸಗಳಿಗೆ ಅಡ್ಡಿಪಡಿಸಿ ತೊಂದರೆ ನೀಡಿದರೆ ಲೈಸೆನ್ಸ್ (license) ರದ್ದು
  • ಗ್ರಾಹಕರಿಂದ ಸ್ವೀಕರಿಸಿದ ಹಣಕ್ಕೆ ಅಧಿಕೃತ ಸಹಿ ಮಾಡಿದ ರಶೀದಿ ಕಡ್ಡಾಯ (Receipt is mandatory)
  • ಸಾಲ ಪಡೆದವರು ಬಡ್ಡಿ, ಕಂತು ಪಾವತಿ ವಿವರ ಕೇಳಿದರೆ ಸಂಸ್ಥೆಗಳು ಕೊಡಬೇಕು
  • ಮೈಕ್ರೋ ಫೈನಾನ್ಸ್‌ಗಳು (Micro Finance) ಕಡ್ಡಾಯವಾಗಿ ಸ್ಥಳೀಯ ಕಚೇರಿಯನ್ನು ಹೊಂದಿರಬೇಕು
  • ಗ್ರಾಹಕರಿಗೆ ವಿಧಿಸುವ ಬಡ್ಡಿ ದರವನ್ನು (Interest rate) ಕಚೇರಿ ಫಲಕದಲ್ಲಿ ಪ್ರದರ್ಶಿಸಬೇಕು. ಗ್ರಾಹಕರೊಂದಿಗೆ ಪತ್ರ, ಮೌಖಿಕವಾಗಿ ಕನ್ನಡದಲ್ಲಿ ವ್ಯವಹರಿಸಬೇಕು.
  • ಲೈಸನ್ಸ್‌ ರಹಿತ ಸಂಸ್ಥೆಗಳು ಸಾಲ ವಸೂಲಿಗೆ ಕಿರುಕುಳ ನೀಡಿದ್ರೆ ಪರಿಹಾರ ಪಡೆಯಬಹುದು. ಸಾಲದಿಂದ ಸಂಪೂರ್ಣ ಬಿಡುಗಡೆಯನ್ನೂ ಕೋರಬಹುದು.
  • ಪ್ರತಿ 3 ತಿಂಗಳಿಗೊಮ್ಮೆ ಸಾಲ ಪಡೆದವರು, ಸಾಲ ವಿತರಣೆ ಮೊತ್ತ ಮತ್ತು ಬಡ್ಡಿ ಕುರಿತ ವಿವರಗಳನ್ನು ಪ್ರಾಧಿಕಾರಕ್ಕೆ ಮೈಕ್ರೋ ಫೈನಾನ್ಸ್‌ಗಳು (Micro Finance) ಒದಗಿಸಬೇಕು
  • ಈ ನಿಯಮವನ್ನು ಪಾಲಿಸದಿದ್ದರೆ ಸಂಸ್ಥೆಯವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 10 ಸಾವಿರ ರು. ದಂಡ ವಿಧಿಸಲು ಸುಗ್ರೀವಾಜ್ಞೆಯಲ್ಲಿ ಅವಕಾಶ.
  • ಸಾಲ ವಿಚಾರದ ವ್ಯಾಜ್ಯಗಳು, ಮೇಲ್ಮನವಿಗಳು ಬಾಕಿ ಇದ್ದಲ್ಲಿ ಸಿವಿಲ್ ಕೋರ್ಟ್‌ಗಳು (Civil Courts) ಸಾಲಗಾರರಿಂದ ಬಡ್ಡಿ, ಸಾಲ ವಸೂಲಿ ಅರ್ಜಿಗಳನ್ನು ಪರಿಗಣಿಸಬಾರದು

ಸಾಲ ವಸೂಲಿ ಹೆಸರಲ್ಲಿ ಕಿರುಕುಳ ನೀಡುವವರಿಗೆ ಗರಿಷ್ಠ ಐದು ಲಕ್ಷ ರೂಪಾಯಿ ದಂಡ, 10 ವರ್ಷಗಳವರೆಗೆ ದಂಡ ವಿಧಿಸಲು ಅವಕಾಶ ಇದೆ. ಒಟ್ಟಾರೆ ಮೈಕ್ರೋ ಫೈನಾನ್ಸ್‌ (Micro Finance) ಕಿರುಕುಳಕ್ಕೆ ಬ್ರೇಕ್ ಹಾಕಲು ಸರ್ಕಾರ ಕಠಿಣ ನಿಯಮಗಳನ್ನ (Govt strict rules) ಹೊರಡಿಸಿದೆ. ಆದ್ರೂ ಪ್ರಕರಣಗಳ ಸರಣಿಗಳು ಕಮ್ಮಿಯಾಗ್ತಿಲ್ಲ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದು ಸಾಲಗಾರರ ಅಟ್ಟಹಾಸಕ್ಕೆ ಮೂಗುದಾರ ಹಾಕ್ತಿದೆ. ಸದ್ಯ ಸುಗ್ರಿವಾಜ್ಞೆ ಪ್ರತಿ ರಾಜ್ಯಪಾಲರ ಅಂಗಳ (Governor’s Yard) ತಲುಪಿದ್ದು ಇನ್ನೇನು ಅಂಗೀಕಾರ ಬಾಕಿಯಿದೆ.

Tags: Civil Courtsdraft copyGovernerGovt strict ruleKarnatakamicro financepoliticsState Govt

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.