ಗೋವಾದಲ್ಲಿ ಗಣಿಗಾರಿಕೆಗೆ ಮತ್ತೆ ಅವಕಾಶ – ಪಿ. ಚಿದಂಬರಂ!

ಪಣಜಿ : ಗೋವಾದಲ್ಲಿ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳು ಮತಗಳನ್ನು ಸೆಳೆಯಲು ವಿವಿಧ ರೀತಿಯಲ್ಲಿ ಕಸರತ್ತು ನಡೆಸುತ್ತಿವೆ. ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿಗಾರಿಕೆಯನ್ನು ಮುಂದಿನ ಮೂರರಿಂದ ಆರು ತಿಂಗಳೊಳಗೆ ಪ್ರಾರಂಭಿಸುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ತಿಳಿಸಿದರು. ಗಣಿಗಾರಿಕೆ ಗೋವಾದ ಪ್ರಮುಖ ಆದಾಯದ ಮೂಲವಾಗಿತ್ತು. ಆದರೆ 2018ರಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಸ್ಥಗಿತಗೊಂಡಿತ್ತು. ಗಣಿಗಾರಿಕೆ ಉದ್ಯಮದಲ್ಲಿ ನಡೆದ ಭ್ರಷ್ಟಾಚಾರಗಳನ್ನು ತನಿಖೆ ನಡೆಸಿ ಪುನಾರಂಭಿಸಲು ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳುತ್ತೇವೆ. ಜೊತೆಗೆ ಮಾದರಿ ನಕ್ಷೆಯನ್ನು ರೂಪಿಸಲಾಗುವುದು. ಇದಕ್ಕೆ ಉನ್ನತ ಮಟ್ಟದ ಕಾನೂನು ತಜ್ಞರ ತಂಡವನ್ನು ರಚಿಸಿ ಸಮಾಲೋಚಿಸಲಾಗುವುದು ಎಂದು ಅವರು ಹೇಳಿದರು.


ಈ ಎಲ್ಲಾ ಪ್ರಕ್ರಿಯೆಗೆ ಸರ್ಕಾರ ರಚನೆಯಾದ ಮೂರರಿಂದ ಆರು ತಿಂಗಳೊಳಗೆ ಗಣಿಗಾರಿಕೆ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆಗೊಳಿಸಿ ತಿಳಿಸಿದರು. ಸುಮಾರು ಒಂದು ಅಥವಾ ಎರಡು ತಿಂಗಳುಗಳಲ್ಲಿ ಕಾನೂನಾತ್ಮಕವಾಗಿ ಸುಸ್ಥಿರ ಗಣಿಗಾರಿಕೆಯ ಮಾದರಿಯನ್ನು ಸಿದ್ಧಪಡಿಸಲು ಕಾಲವಕಾಶ ಬೇಕಾಗುತ್ತದೆ. ಅದಾದ ಬಳಿಕ ತಕ್ಷಣವೇ ಕಾರ್ಯಗತಗೊಳಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇದೇ ತಿಂಗಳ ಫೆಬ್ರವರಿ 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪ್ರಬಲ ಪೈಪೋಟಿ ನೀಡುತ್ತಿವೆ. ಮೊದಲ ಬಾರಿಗೆ ಆಪ್ ಹಾಗು ಸಮಾಜವಾದಿ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.