Bengaluru : ನಾನು ನಿಂತ ನೀರಲ್ಲ, ಹರಿಯುವ ನೀರು ಎಂದು ಬಿಜೆಪಿ ಪಕ್ಷದ ಸಚಿವ ವಿ. ಸೋಮಣ್ಣ (V. Somanna) ಅವರು ನೀಡಿರುವ ಹೇಳಿಕೆ ಇದೀಗ ರಾಜಕೀಯ ಕಣದಲ್ಲಿ ಸಾಕಷ್ಟು (Minister Somanna statement) ಚರ್ಚೆಗೆ ಗ್ರಾಸವಾಗಿದೆ.
ಮುಂದಿನ ಒಂದು ವಾರದ ಅವಧಿಯಲ್ಲಿ ವಿ. ಸೋಮಣ್ಣ ಅವರು ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಪಕ್ಷ ಸೇರುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಸೋಮಣ್ಣ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಗೆ ಸೇರಿಸದಿರಲು ಆಡಳಿತ ಪಕ್ಷ ನಿರ್ಧರಿಸಿದೆ ಎಂದು ಹೇಳಲಾಗಿದೆ.
ವಿಧಾನಸಭಾ ಚುನಾವಣೆಗೆ (Assembly election) ಮುನ್ನ, ಕರ್ನಾಟಕದ ವಸತಿ ಸಚಿವ ವಿ. ಸೋಮಣ್ಣ ಅವರು ಪಕ್ಷದ
ಚುನಾವಣಾ ನಿರ್ವಹಣಾ ಸಮಿತಿಯಲ್ಲಿ ತಮ್ಮ ಹೆಸರನ್ನು ಸೇರಿಸದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯುವ ಸುಳಿವು ನೀಡಿದ್ದಾರೆ.
ವಿ.ಸೋಮಣ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ, ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಸೋಮಣ್ಣ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಗೆ ಸೇರಿಸದಿರಲು ಆಡಳಿತ ಪಕ್ಷ ನಿರ್ಧರಿಸಿದೆ.
ಇದನ್ನೂ ಓದಿ : https://vijayatimes.com/congress-leaders-tweeted/
ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ ನಡ್ಡಾ (BJP National President JP Nadda) ಅವರು ಈ ತಿಂಗಳ ಆರಂಭದಲ್ಲಿ ನಡೆಸಿದ ಪಕ್ಷದ ಮೊದಲ ಜನಸಂಕಲ್ಪ ರಥ ಯಾತ್ರೆಗೆ ಸಚಿವ ವಿ.ಸೋಮಣ್ಣ ಅವರು ಗೈರು ಹಾಜರಾಗಿದ್ದರು.
ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ.ಸೋಮಣ್ಣ ಅವರು, ನಾನೇನು ನಿಂತ ನೀರಲ್ಲ, ಹರಿಯುವ ನೀರು,
ಕ್ಷೇತ್ರದ ಜನತೆ ನನ್ನನ್ನು ಸ್ವಂತ ಮಗನಂತೆ ಕಂಡಿದ್ದಾರೆ, ಯಾರ ಬಗ್ಗೆಯೂ ಒಂದೂ ಮಾತನಾಡಿಲ್ಲ,
ರಾಜ್ಯಾಧ್ಯಕ್ಷರು ಹಾಗೂ ಮುಖಂಡರ ಜತೆ ಕೆಲ ಸಮಸ್ಯೆಗಳ ಕುರಿತು ಮಾತನಾಡಿದ್ದೇನೆ. ನನಗೆ ಈಗ 72 ವರ್ಷ, ಈಗ ನನಗೆ ಏನೂ ಕೆಲಸವಿಲ್ಲ,
ನಾನು ಹರಿಯುವ ನೀರು ಎಂದು ಹೇಳಿದರು. ಇದರೊಟ್ಟಿಗೆ ನಿಮಗೆ ಪ್ರಚಾರ ಸಮಿತಿಯಲ್ಲಿ ಅವಕಾಶ ನೀಡದಿರುವ ಬಗ್ಗೆ ಹೇಳಿ ಎಂದು ಪ್ರಶ್ನಿಸಿದಾಗ, ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಶುಕ್ರವಾರದಂದು ಕರ್ನಾಟಕ ಬಿಜೆಪಿ (Karnataka BJP) ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರಚಾರ ಸಮಿತಿ ಮತ್ತು ನಿರ್ವಹಣಾ ಸಮಿತಿಯನ್ನು ನೇಮಕ ಮಾಡುವುದಾಗಿ ಘೋಷಿಸಿತು.
ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yeddyurappa) ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಬಹುದು ಎಂಬ ವರದಿಗಳು ಕೂಡ ಕೇಳಿ ಬಂದಿದ್ದವು.
ಆದರೆ, ಇದ್ಯಾವುದಕ್ಕೂ ಉತ್ತರಿಸಿದ ಬಿಜೆಪಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸದಸ್ಯರನ್ನಾಗಿ ಉಳಿಸಿಕೊಂಡು ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.
25 ಸದಸ್ಯರ ತಂಡ ರಚಿಸಲಾಗಿದ್ದು, ಕರ್ನಾಟಕದ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಅವರಿಗೂ ಅವಕಾಶ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸಮಿತಿಗಳನ್ನು ರಚಿಸಿದ್ದಾರೆ.
ಇದನ್ನೂ ಓದಿ : https://vijayatimes.com/congress-leaders-tweeted/
ಬಿ.ಎಸ್.ಯಡಿಯೂರಪ್ಪ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Naleen Kumar Kateel)
ಅವರು 25 ಸದಸ್ಯರನ್ನು ನೇಮಕ ಮಾಡಿದ್ದು, ಬಿ.ವೈ.ವಿಜಯೇಂದ್ರ ಅವರಿಗೂ ಸದಸ್ಯರಾಗುವ ಅವಕಾಶ ನೀಡಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರನ್ನು ಚುನಾವಣಾ ನಿರ್ವಹಣಾ ಸಂಯೋಜಕರನ್ನಾಗಿ ನೇಮಿಸಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿಗೆ ಶೋಭಾ ಕರಂದ್ಲಾಜೆ ಸೇರಿದಂತೆ 14 ಸದಸ್ಯರನ್ನು ನೇಮಕ ಮಾಡಲಾಗಿದೆ.