ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ

ಚಿಕ್ಕಮಗಳೂರು ಸೆ 28 :  ದತ್ತಪೀಠ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ, ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಹಿಂದೂ ಅರ್ಚಕರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಇದುವರೆಗೂ ದತ್ತಜಯಂತಿ ಸಮಯದಲ್ಲಿ ಮಾತ್ರ ಹಿಂದೂ ಅರ್ಚಕರಿಂದ ಪೂಜೆ ನೆರವೇರಿಸಲಾಗುತ್ತಿತ್ತು. ಖಾಯಂ ಹಿಂದೂ ಅರ್ಚಕರ ನೇಮಕಕ್ಕಾಗಿ ಹಿಂದೂ ಪರ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದವು. ಇದೀಗ ಹೈಕೋರ್ಟ್ ಅರ್ಚಕರ ನೇಮಕಕ್ಕೆ ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ.

ವಿವಾದದ ಹಾದಿ

ಚಿಕ್ಕಮಗಳೂರಿನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾದಲ್ಲಿ ಮುಜಾವರ್​ಗಳ ಬದಲು ಹಿಂದೂ ಅರ್ಚಕರ ನೇಮಕ ಆಗಬೇಕು ಎಂದು ಬಿಜೆಪಿ ಹಾಗೂ ಸಂಘಪರಿವಾರದ ಅಂಗ ಸಂಸ್ಥೆಗಳು ಒತ್ತಾಯಿಸುತ್ತಿದ್ದವು. 2014ರಲ್ಲಿ ಸುಪ್ರೀಂಕೋರ್ಟ್​ ಸಹ ಹಿಂದೂ ಅರ್ಚಕರ ನೇಮಕಕ್ಕೆ ಸಮ್ಮತಿಸಿ ತೀರ್ಪು ನೀಡಿತ್ತು. ಅದರೆ 2018ರಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಮುಜಾವರ್​ಗಳನ್ನೇ ಮುಂದುವರಿಸಲು ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ಸಂವರ್ಧನಾ ಸಮಿತಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯವು ಪೂಜಾ ವಿಧಿವಿಧಾನ ಕುರಿತು ಹೊಸದಾಗಿ ತೀರ್ಮಾನಿಸಲು ಸೂಚಿಸಿದೆ.

ಹೈಕೋರ್ಟ್ ತೀರ್ಪಿನ್ನು ಸ್ವಾಗತಿಸಿದ ಸಚಿವ ಸುನೀಲ್ ಕುಮಾರ್

ಹಿಂದೂಗಳ ಶ್ರದ್ಧಾಕೇಂದ್ರವಾದ ಚಿಕ್ಕಮಗಳೂರಿನ ಐತಿಹಾಸಿಕ ದತ್ತಾತ್ರೇಯ ಪೀಠ ಕುರಿತಂತೆ ಇವತ್ತು ಘನ ನ್ಯಾಯಾಲಯ ವಿಶೇಷ ತೀರ್ಪು ಕೊಟ್ಟಿದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಹಿಂದೂ ಅರ್ಚಕರ ನೇಮಕ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಒಂದು ಸಮಿತಿ ರಚಿಸಿ, ಅದರ ಅಭಿಪ್ರಾಯ ತೆಗೆದುಕೊಂಡು ಹಿಂದೂ ಅರ್ಚಕರ ನೇಮಕ ಮಾಡಬೇಕು ಅಂತ ಹೈಕೋರ್ಟ್ ಹೇಳಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ

Exit mobile version