Kannada live news
ಬೀಡ್ ನ 15 : ಅಪ್ರಾಪ್ತ ವಿವಾಹಿತೆ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ 400 ಮಂದಿ ಅತ್ಯಾಚಾರ ಎಸಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಹಾರಾಷ್ಟ್ರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರೂ ಈ ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ.
ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಇತ್ತ ತಂದೆ ಮಗಳನ್ನು ಬೇಗ ಮದುವೆ ಮಾಡಿ ಕಳುಹಿಸಬೇಕೆಂದು, ವರನನ್ನು ಹುಡುಕಿ ಮದುವೆ ಮಾಡಿದ್ದರು. ಗಂಡನ ಮನೆ ಸೇರಿದಾಗ, ಆಕೆಯ ಗಂಡ 6 ತಿಂಗಳು ಕೆಲಸ ಟ್ರೈನಿಂಗ್ ಹಿನ್ನೆಲೆ ಬೇರೆ ಊರಿಗೆ ತೆರಳಿದ್ದ. ಆಗ ಮಾವ ಸೊಸೆ ಮೇಲೆ ಮಾವ ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ.
Kannada live news vijayatimes
ಪತಿ ಮನೆಯ ಕಿರಕುಳದಿಂದ ಬೇಸತ್ತ ಆಕೆ ಕೆಲಸ ಹುಡುಕಿ ಹೋದಾಗ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಇಬ್ಬರು ದುರುಳರು ಅತ್ಯಾಚಾರವೆಸಗಿದ್ದಾರೆ. ಇದಾದ ಬಳಿಕ ಆಕೆ ಯಾವುದೋ ಜಾಲದಲ್ಲಿ ಸಿಲುಕಿ 400 ಮಂದಿ ಆಕೆ ಮೇಲೆ ಅತ್ಯಾಚಾರವೆಸಿಗಿದ್ದಾರೆ. ಪೊಲೀಸರು ಕೂಡ ತಮ್ಮ ತೀಟೆ ತಿರಿಸಿಕೊಳ್ಳಲು ಆಕೆಯನ್ನು ಬಳಸಿಕೊಂಡಿದ್ದಾರೆ. ಈಗ ಆಕೆ ಗರ್ಭಿಣಿಯಾಗಿದ್ದಾಳೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಪ್ರಾಪ್ತ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ಬೀಡ್ ಪೊಲೀಸರು ತಿಳಿಸಿದ್ದಾರೆ. ಬಾಲ್ಯ ವಿವಾಹ, ಅತ್ಯಾಚಾರ, ಕಿರುಕುಳ, ಪೊಕ್ಸ್ ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
Kannada online news portal vijayatimes