ಹಾಸನದಲ್ಲಿ ಹಿಂದೂ ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು!

ಸೋಮವಾರ(Monday), ಮೇ 30 ರಂದು ಅಪರಿಚಿತ ವ್ಯಕ್ತಿಗಳು ಕರ್ನಾಟಕ ರಾಜ್ಯದ ಹಾಸನ(Hassan) ಜಿಲ್ಲೆಯಲ್ಲಿ ಅನಾವರಣಗೊಳ್ಳಲು ಸಜ್ಜಾದ ಹಿಂದೂ ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ.

ಮಲೆಕಲ್ಲು ತಿರುಪತಿ ದೇವಸ್ಥಾನದ ವಸ್ತುಸಂಗ್ರಹಾಲಯದ ವಸ್ತುಪ್ರದರ್ಶನ ಕೇಂದ್ರದಲ್ಲಿ ವಿಗ್ರಹಗಳನ್ನು ಇರಿಸಲಾಗಿತ್ತು. ಪೊಲೀಸರ ಪ್ರಕಾರ, 10 ಕ್ಕೂ ಹೆಚ್ಚು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅರಸೀಕೆರೆ(Arasikere) ತಾಲೂಕಿನಲ್ಲಿ ಪೊಲೀಸರು ಶ್ವಾನದಳವನ್ನು ನಿಯೋಜಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಧ್ವಂಸಗೊಂಡ ವಿಗ್ರಹಗಳು ಪ್ರತಿಷ್ಠಾಪನೆಗೆ ಸಿದ್ಧವಾಗಿದ್ದು, ಮತ್ತು ಕೆಲವು ನಿರ್ಮಾಣ ಹಂತದಲ್ಲಿವೆ ಎಂದು ವರದಿಯಾಗಿದೆ. ಅಲ್ಲದೆ, ವಿಗ್ರಹಗಳನ್ನು ಒಡೆಯಲು ದುಷ್ಕರ್ಮಿಗಳು ರಾಡ್ ಮತ್ತು ಇತರ ಸಲಕರಣೆಗಳನ್ನು ಬಳಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ದೇವಸ್ಥಾನಕ್ಕೆ ಸೇರದ ಖಾಸಗಿ ಮ್ಯೂಸಿಯಂನಲ್ಲಿ ವಿಗ್ರಹಗಳನ್ನು ಇಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು.

Exit mobile version