ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ‘ಮಿಷನ್ ಮೋಡ್’ ಅಡಿ ನೇಮಿಸಿಕೊಳ್ಳಿ : ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರ ನೇಮಕಾತಿಯನ್ನು “ಮಿಷನ್ ಮೋಡ್” ನಲ್ಲಿ(Mission Mode) ಕೈಗೊಳ್ಳುವಂತೆ ಪ್ರಧಾನಿ(Primeminister) ನರೇಂದ್ರ ಮೋದಿ(Narendra Modi) ಅವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಪಿಎಂಒ(POI) ಮಂಗಳವಾರ ಮಾಹಿತಿ ನೀಡಿದೆ. ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ ನಂತರ,

ಪಿಎಂ ಮೋದಿಯವರ ನಿರ್ದೇಶನ ಹೊರಬಂದಿದೆ ಎಂದು ಅವರ ಕಚೇರಿ ಅಧಿಕೃತವಾಗಿ ಪ್ರಕಟಿಸಿದೆ. ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಈ ನಿರ್ಧಾರ ಹೊರಬಿದ್ದಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ ಪ್ರಕಟವಾಗಿದೆ.

“ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನ ಅಡಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ” ಎಂದು ಪಿಎಂಒ ಟ್ವೀಟ್‌ನಲ್ಲಿ ಅಧಿಕೃತ ಮಾಹಿತಿ ನೀಡಿದೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.