Bengaluru : ಕುಟುಂಬ ರಾಜಕಾರಣ (Family politics) ವಿರುದ್ಧ ಬಹಿರಂಗವಾಗಿಯೇ ಕಿಡಿ ಕಾರಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶಾಕ್ (Committee shock) ನೀಡಿದೆ. ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಯತ್ನಾಳ್ ಅವರಿಗೆ ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಕುಟುಂಬ ರಾಜಕಾರಣ, ಅಪ್ಪ ಮಕ್ಕಳ ರಾಜಕಾರಣ, ಬಣ ರಾಜಕೀಯ ವಿರುದ್ಧ ಮಾತನಾಡುತ್ತಿರುವ ಅವರ ವಿರುದ್ಧ ಬಿ.ವೈ.ವಿಜಯೇಂದ್ರ (B. Y. Vijayendra) ಅವರು ವಾಗ್ದಳಿ ನಡೆಸಿದ್ದಾರೆ. ಬಿಜೆಪಿಯಲ್ಲಿ ಬೀದಿ ಜಗಳ ಶುರುವಾಗಿದೆ. ಇದಕ್ಕೆ ಕಡಿವಾಣ ಹಾಕಲು ಬಿಜೆಪಿ ಕೇಂದ್ರ (BJP Centre) ಸಮಿತಿ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಅವರನ್ನು ನಿಯಂತ್ರಿಸಲು ಮುಂದಾಗಿದೆ.
ಹಿಂದುತ್ವದ ಹೋರಾಟ, ಭ್ರಷ್ಟಾಚಾರದ (Fight, corruption) ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ (dynastic politics) ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ಹೇಳುವ ಮೂಲಕ ಇದ್ಯಾವುದಕ್ಕೆ ಜಗ್ಗುವುದಿಲ್ಲ. ನನ್ನ ಹೋರಾಟ ಜನಪರ ಎಂಬ ಸಂದೇಶ ರವಾನಿಸಿದ್ದಾರೆ. ಬಿಜೆಪಿ (BJP) ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ (BJP in Karnataka) ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ ಎಂದು ಬಹಿರಂಗವಾಗಿ ಗುಡುಗಿದ್ದಾರೆ.
ಇಂದು ದೆಹಲಿಗೆ ತೆರಳಲಿರುವ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅವರ ತಂಡವು ಅಲ್ಲಿ ಬಿಜೆಪಿ (BJP) ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಾರೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಆದರೆ ವಕ್ಫ್ ಅನ್ಯಾಯದ ವಿರುದ್ಧ ದೆಹಲಿಗೆ ಹೋಗಿ ಸಮಿತಿಗೆ ವರದಿ ಸಲ್ಲಿಸುತ್ತೇವೆ. ವಕ್ಫ ಹಠಾವೋ, ದೇಶ್ ಬಚಾವೋ ಹೋರಾಟ ಕೇವಲ ಚುನಾವಣೆಗಾಗಿ ಅಲ್ಲ, ದೇಶಕ್ಕಾಗಿದೆ. ಈ ಹೋರಾಟದಿಂದ ಬಸನಗೌಡ ಪಾಟೀಲ್ ಯತ್ನಾಳ್ (Patil Yatnal) ಹಾಗೂ ರಮೇಶ್ ಜಾರಕಿಹೊಳಿ ಅವರು ಲೀಡರ್ ಆಗುತ್ತಾರೆ ಎಂಬದೇನಿಲ್ಲ. ಅವರನ್ನು ಲೀಡರ್ ಮಾಡುವ ಅಗತ್ಯವಿಲ್ಲ. ಅವರು ಈಗಾಗಲೇ ಲೀಡರ್ ಆಗಿದ್ದಾರೆ. ಹಿಂದೂ ಪರ ಕೆಲಸ ಮಾಡುತ್ತಿದ್ದಾರೆ. ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ಬಿಜೆಪಿ (BJP) ಮಾಜಿ ಸಂಸದ ಪ್ರತಾಪ್ ಸಿಂಹ್ ಅವರು ಶಾಸಕ ಬಸನಗೌಡ ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.