ಆಸ್ತಿ ವಿವರ ಸಲ್ಲಿಸದ ರಾಜ್ಯದ ಶಾಸಕರ ಹೆಸರು ಪ್ರಕಟಿಸಿದ ಲೋಕಾಯುಕ್ತ: ಗಡುವು ಮುಗಿದರೂ ವಿವರ ಸಲ್ಲಿಸಿಲ್ಲ.

Bengaluru: ಕರ್ನಾಟಕದ (Karnataka) ಶಾಸಕರು ಹಾಗೂ ವಿಧಾನಪರಿಷತ್ (MLAs not submit asset Detail) ಸದಸ್ಯರು ಆಸ್ತಿ ವಿವರ ಸಲ್ಲಿಕೆಯ ಗಡುವು ಮುಗಿದಿದ್ದರೂ ವಿವರ

ಸಲ್ಲಿಸದಿರುವುದಕ್ಕೆ ರಾಜ್ಯ ಲೋಕಾಯುಕ್ತವು ಪಟ್ಟಿಯನ್ನು ಬಹಿರಂಗಡಿಸಿದ್ದು, ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ

ಇದೆ. ಇದೀಗ ಅಂತಿಮವಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ (MLAs not submit asset Detail) ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು (Sriramulu) , ಕೆಸಿ ನಾರಾಯಣಗೌಡ, ಎಸ್ ಅಂಗಾರ ಆಸ್ತಿ ವಿವರ ಸಲ್ಲಿಸದೇ ನಿಮಯ ಉಲ್ಲಂಘಿಸಿದ್ದರು. ಈ ಬಾರಿ ರಹೀಂ ಖಾನ್, ಕೆ ಎನ್ ರಾಜಣ್ಣ,

ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ ಎಚ್ ಮುನಿಯಪ್ಪ (K H Muniyappa) ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ

ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.

ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ.

ಇನ್ನುಸಚಿವ ಮಧು ಬಂಗಾರಪ್ಪ (Madhu Bangarappa) ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ

ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಗಡುವು ನೀಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ
ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂನ್ 30 ಡೆಡ್​ಲೈನ್ (Deadline) ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್ ಅವರು

ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ (Vanditha Sharma) ಅವರಿಗೆ ಮೌಖಿಕ ಸೂಚನೆ ನೀಡಿದ್ದರು.

ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ

ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸೆಪ್ಟಂಬರ್ (September) 1ಕ್ಕೆ

ನೊಟೀಸ್ ಸಹ ಜಾರಿ ಮಾಡಲಾಗಿತ್ತು.

ಇದನ್ನು ಓದಿ: ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ: ವಿಷಪೂರಿತ ಆಹಾರ ಸೇವನೆ

Exit mobile version