ಬೆಂಗಳೂರು ಜ 27 : ಕಾಂಗ್ರೆಸ್ನಲ್ಲಿ ಸಿ.ಎಂ. ಇಬ್ರಾಹಿಂ ವರ್ಚಸ್ಸು ಕಡಿಮೆಯಾಗುತ್ತಿದ್ದು ಜೊತೆಗೆ ವಿಧಾನ ಪರಿಷತ್ನ ಪ್ರತಿಪಕ್ಷದ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿದ ಹಿನ್ನಲೆಯಲ್ಲಿ ಬೇಸತ್ತು, ಕಾಂಗ್ರೆಸ ಪಕ್ಷದಿಂದ ಹೊರ ಹೋಗಲು ಸಿ.ಎಂ. ಇಬ್ರಾಹಿಂ ನಿರ್ಧರಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು ನಮಗೂ ಕಾಂಗ್ರೆಸ್ಗೂ ಮುಗಿದ ಅಧ್ಯಾಯ ಎಂದು ಸಿಎಂ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಎಂಎಲ್ಸಿ ಸಿ.ಎಂ ಇಬ್ರಾಹಿಂ , ಶಿಘ್ರದಲ್ಲೇ ನನ್ನ ನಿರ್ಧಾರವನ್ನ ತಿಳಿಸುತ್ತೇನೆ, ಎಲ್ಲಾ ಒಂದೇ ಬಾರಿಗೆ ಹೇಳುವುದಿಲ್ಲ. ಸಿದ್ದರಾಮಯ್ಯರಿಗಾಗಿ ನಾವು ದೇವೆಗೌಡರನ್ನ ಬಿಟ್ಟು ಬಂದೆವು, ನಮಗೂ ಕಾಂಗ್ರೆಸ್ಗೂ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯಗೆ ನಾವು ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೊರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ ಎಂಎಲ್ಸಿ ಸಿಎಂ ಇಬ್ರಾಹಿಂ ಹೇಳಿದರು.
ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ ಸಿಎಂ ಇಬ್ರಾಹಿಂ, ದೇವೇಗೌಡರನ್ನು ಕೇಳಿ ಮುಂದೆ ತೀರ್ಮಾನ ಮಾಡುತ್ತೇನೆ. ನನಗೆ ಸ್ಥಾನ ತಪ್ಪಿಸಿದ ಬಗ್ಗೆ ಸಿದ್ದರಾಮಯ್ಯ ಉತ್ತರಿಸಬೇಕು. ಶಿವಕುಮಾರ್ ಅವರಿಗೂ ನಮಗೂ ಹೊಂದಾಣಿಕೆಯಾಗಲ್ಲ. ಸಿದ್ದರಾಮಯ್ಯಗೂ ನನಗೆ ಚೆನ್ನಾಗಿತ್ತು. ದೆಹಲಿಯಿಂದ ನನಗೆ ಹಲವು ಕರೆಗಳು ಬಂದಿವೆ. ಎಲ್ಲ ಮಾಹಿತಿ ನನ್ನ ಬಳಿ ಇಟ್ಟುಕೊಂಡಿದ್ದೇನೆ ಎಂದರು.

ಸೋನಿಯಾ ಗಾಂಧಿ ನಮ್ಮ ಮೇಲಿದ್ದ ಭಾರ ಕಡಿಮೆ ಮಾಡಿದ್ದಾರೆ. ಈಗ ನಿರ್ಧಾರ ತೆಗೆದುಕೊಳ್ಳಲು ನಾನು ಸ್ವತಂತ್ರನಾಗಿದ್ದೇನೆ. ಸಿದ್ದರಾಮಯ್ಯರಿಂದಲೇ ನಾನು ಕಾಂಗ್ರೆಸ್ಗೆ ಬಂದೆ. ಸಿದ್ದರಾಮಯ್ಯ ಸಲುವಾಗಿ ದೇವೇಗೌಡರನ್ನು ಬಿಟ್ಟು ಬಂದೆ. 1996ರಲ್ಲಿ ರಾಜ್ಯಸಭೆ ಟಿಕೆಟ್ ಘೋಷಿಸಿ ಕ್ಯಾನ್ಸಲ್ ಮಾಡಿದರು. ಆಗ ಕಾಂಗ್ರೆಸ್ ಪಕ್ಷ ಬಿಟ್ಟೆ, ಆಗ ಕಾಂಗ್ರೆಸ್ ಎಲ್ಲಿ ಹೋಯ್ತು? 20 ವರ್ಷದ ಬಳಿಕ ಕಾಂಗ್ರೆಸ್ ಅದೇ ರೀತಿ ಮಾಡಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಇಬ್ರಾಹಿಂ ಪಕ್ಷ ತೊರೆಯುವ ಹೇಳಿಕೆ ನೀಡಿದ್ದಾರೆ. ಪರಿಷತ್ ವಿಪಕ್ಷ ನಾಯಕನ ಹುದ್ದೆಗೆ ಎಂಎಲ್ಸಿ ಸಿಎಂ ಇಬ್ರಾಹಿಂ ಪರ ಸಿದ್ದರಾಮಯ್ಯ ಲಾಬಿ ಮಾಡಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಹಿರಿಯ ನಾಯಕರು ಬಿ.ಕೆ. ಹರಿಪ್ರಸಾದ್ ಪರವಾಗಿ ಲಾಬಿ ಮಾಡಿದ್ದರು.