ಬೆಳಗಾವಿ ನ 17 : ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ಗೆ ಎಂಎಲ್ಸಿ ಟಿಕೆಟ್ ಫಿಕ್ಸ್ ಆಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಗೆ ಟಿಕೆಟ್ ಕೊಡಿಸುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಯಶಸ್ವಿಯಾಗಿದ್ದಾರೆ.
ಬೆಳಗಾವಿಯಲ್ಲಿ MLC ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ಗೆ ಟಿಕೆಟ್ ಫಿಕ್ಸ್ ಆಗಿದೆ. ಸಹೋದರನಿಗೆ ಟಿಕೆಟ್ ಕೊಡಿಸಲು ದೆಹಲಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೀಡುಬಿಟ್ಟಿದ್ದರು. ಬೆಳಗಾವಿ ಕ್ಷೇತಕ್ಕಾಗಿ ಎಂಟು ಅಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಆಕಾಂಕ್ಷಿಗಳ ಫೈಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ಗೆ ಟಿಕೆಟ್ ಫಿಕ್ಸ್ ಆಗಿದೆ. ಭಾನುವಾರ ನಡೆದ ಕೆಪಿಸಿಸಿ ನಾಯಕರ ಸಭೆಯಲ್ಲಿ ಒಮ್ಮತದ ತೀರ್ಮಾನವಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.