ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಕೊಲೆ ಪ್ರಕರಣ: ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ

Bengaluru: ಸಂಶೋಧಕ ಎಂ.ಎಂ.ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿಲಂಕೇಶ್ ಅವರ ಕೊಲೆ (MMKalburgi – GauriLankesh case) ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆಗೆ

ರಾಜ್ಯದಲ್ಲಿ ವಿಶೇಷ ಕೋರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ (State Government) ತೀರ್ಮಾನಿಸಿದ್ದು, ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ತಮ್ಮದೇ ಸಾಮಾಜಿಕ ಹೋರಾಟಗಳನ್ನು ಮಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ. ಕಲಬುರ್ಗಿ

ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದರೂ, ಹತ್ಯೆಗೆ ಯಾರು ಸುಪಾರಿ ಕೊಟ್ಟಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ

ಎನ್ನುವ (MMKalburgi – GauriLankesh case) ಸತ್ಯಾಂಶ ತಿಳಿದುಬಂದಿಲ್ಲ.

ಅಲ್ಲದೇ ಹಲವು ವರ್ಷಗಳಿಂದ ಈ ಪ್ರಕರಣ ನಿಧಾನಗತಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಮುಖ್ಯಮಂತ್ರಿ

ಸಿದ್ದರಾಮಯ್ಯ ಸೂಚಿಸಿದ್ದು, ಎಂಎಂ ಕಲಬುರ್ಗಿ ಅವರನ್ನು 2015 ಆಗಸ್ಟ್ 31ರಂದು ಧಾರವಾಡದ (Dharwad) ಅವರ ಸ್ವಗೃಹದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಇನ್ನು ಈ ಪ್ರಕರಣ ಸಂಭವಿಸಿ ಏಳು ವರ್ಷಗಳು ಪೂರ್ಣಗೊಂಡಿದ್ದು, ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ (Charge Sheet) ಸಲ್ಲಿಕೆಯಾಗಿದೆ. ಮೃತರ ಕುಟುಂಬದವರ ವಿಚಾರಣೆಗಳು

ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಎಂಎಂ ಕಲಬುರ್ಗಿ ಪತ್ನಿ ಉಮಾದೇವಿ

ಅವರು ಕೋರಿದ್ದು, ಈ ಸಂಬಂಧ ಜರೂರು ಅಗತ್ಯ ಕ್ರಮವಹಿಸಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೆಪ್ಟೆಂಬರ್ 05, 2017 ರಂದು ಪತ್ರಕರ್ತೆ (Journalist) ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ.

ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್‌ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು

ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು (Full Time Judge) ನೇಮಕ ಮಾಡುವಂತೆ ಗೌರಿ ಲಂಕೇಶ್

ಸಹೋದರಿ ಕವಿತಾ ಲಂಕೇಶ್ ರವರು ಸರ್ಕಾರಕ್ಕೆ ಕೋರಿದ್ದು. ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ.

ಇದನ್ನು ಓದಿ: ಸರಿಯೋ ತಪ್ಪೋ ನೀವು ಪರಿಹಾರವನ್ನೇ ಘೋಷಿಸಿಲ್ಲ ಎಂದು ಹೇಳಿರುವುದು ಸಹ ಸತ್ಯ ; ಸಿಎಂ ಸಿದ್ದುಗೆ ತೇಜಸ್ವಿ ಸೂರ್ಯ ತಿರುಗೇಟು

Exit mobile version