• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಡಿಜಿಟಲ್ ಜ್ಞಾನ

ಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಉತ್ಪಾದನೆ ಮತ್ತು ವಿನ್ಯಾಸ ಕ್ಷೇತ್ರದ ವಿಸ್ತರಣೆಗೆ ವಿಷನ್ ಡಾಕ್ಯುಮೆಂಟ್: ಎಂ.ಬಿ ಪಾಟೀಲ್

Shameena Mulla by Shameena Mulla
in ಡಿಜಿಟಲ್ ಜ್ಞಾನ, ಪ್ರಮುಖ ಸುದ್ದಿ, ರಾಜ್ಯ
ಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಉತ್ಪಾದನೆ ಮತ್ತು ವಿನ್ಯಾಸ ಕ್ಷೇತ್ರದ ವಿಸ್ತರಣೆಗೆ ವಿಷನ್ ಡಾಕ್ಯುಮೆಂಟ್: ಎಂ.ಬಿ ಪಾಟೀಲ್
0
SHARES
22
VIEWS
Share on FacebookShare on Twitter
  • ಮೊಬೈಲ್ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ರಾಜ್ಯ ಸರ್ಕಾರದಿಂದ (mobile and electronics production plan) ಹೊಸ ಯೋಜನೆ
  • Vision Document ಮೂಲಕ ಉದ್ಯೋಗ ಸೃಷ್ಟಿ ಸಾಧ್ಯತೆ
  • ಕೇಂದ್ರ ಸರ್ಕಾರದ ಪ್ರೇರಣೆಯಲ್ಲಿ ಕೈಗಾರಿಕಾ ವಿಸ್ತರಣೆಗೆ ತಂತ್ರಜ್ಞಾನ ಅಧ್ಯಯನ

Bengaluru: ರಾಜ್ಯದಲ್ಲಿ ಮೊಬೈಲ್ ಮತ್ತು ಇಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸ ಕ್ಷೇತ್ರದ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವಾಕಾಂಕ್ಷಿ ಯೋಜನೆ ರೂಪಿಸಲು

ಬೃಹತ್ ಮತ್ತು ಮಧ್ಯಮ ಕೈಗಾರಿಕಾ (Large and Medium Industrial) ಸಚಿವ ಎಂ.ಬಿ ಪಾಟೀಲ್ (M.B Patil) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 150 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಹಾಗೂ ಹೂಡಿಕೆ (Investment) ಸಾಧ್ಯವಾಗುವಂತೆ “ವಿಷನ್ ಡಾಕ್ಯುಮೆಂಟ್” (Vision Document) ತಯಾರಿಸಲು ಈ ಯೋಜನೆಯು ಮುಖ್ಯ ಪೂರಕವಾಗಿದೆ.

mobile and electronics Vijaya Times

ವಿಧಾನಸೌಧದ (Vidhansoudha) ಕಚೇರಿಯಲ್ಲಿ ನಡೆದ ಸಭೆಯಲ್ಲಿ, MB ಪಾಟೀಲ್ ಅವರು ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) (Indian Cellular and Electronics

Association) ಅಧ್ಯಕ್ಷ ಪಂಕಜ್ ಮಹೀಂದ್ರ (Pankaj Mahindra) ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಅವರು ಕೇಂದ್ರ ಮತ್ತು ಇತರ ರಾಜ್ಯಗಳಲ್ಲಿ ಇರುವ ಮೊಬೈಲ್

ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಯೋಜನೆಗಳ ಅನುಭವವನ್ನು ಅಧ್ಯಯನ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಇಲಾಖೆಯು (IT Department) ಈ ವರ್ಷದ

ಏಪ್ರಿಲ್‌ನಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದರಿಂದ ಪ್ರೇರಿತವಾಗಿ ರಾಜ್ಯ ಸರ್ಕಾರವು ಕೂಡ ತನ್ನ ಸ್ವಂತ ಯೋಜನೆ ರೂಪಿಸುವ ಚಿಂತನೆ ಮಾಡುತ್ತಿದೆ.

ಪ್ರಸ್ತುತ ಇದು ಕರಡು ಹಂತದಲ್ಲಿದ್ದು, ಐಸಿಇಎ (ICEA) ನೀಡುವ ಸಲಹೆಗಳು ಇದಕ್ಕೆ ಮುಖ್ಯ ಪೂರಕವಾಗಲಿವೆ. ಮೊಬೈಲ್ ಫೋನ್ಬಿ (Mobile Phone) ಡಿಭಾಗಗಳ ಹೊರತು ಕೈಗಾರಿಕಾ ಎಲೆಕ್ಟ್ರಾನಿಕ್ಸ್, ಕಾರ್ಯತಂತ್ರ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಸಹ ಅಪಾರ ಉದ್ಯೋಗ (Employment) ಮತ್ತು ಹೂಡಿಕೆ ಅವಕಾಶಗಳಿವೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಪಂಕಜ್ ಮಹೀಂದ್ರ ಅವರು ಕೇಂದ್ರ ಸರ್ಕಾರದ ಯೋಜನೆಯ ವಿವರಗಳನ್ನು ಹಂಚಿಕೊಂಡು, ಸಬ್-ಅಸೆಂಬ್ಲಿ, (mobile and electronics production plan) ಡಿಸ್-ಪ್ಲೇ, ಕ್ಯಾಮರಾ ಮಾಡ್ಯೂಲ್ಸ್, ಬೇರ್ ಕಾಂಪೊನೆಂಟ್ಸ್ ತಯಾರಿಕೆಗೆ ಅಗತ್ಯ ಸಾಧನಗಳ ಮೇಲೆ ಒತ್ತು ನೀಡಲಾಗಿದೆ ಎಂದರು.

ಯೋಜನೆಯ ವ್ಯಾಪ್ತಿಯಲ್ಲಿ ಉದ್ಯಮಿಗಳಿಗೆ ಶೇಕಡಾ 25ರಷ್ಟು ಬಂಡವಾಳ ಸಬ್ಸಿಡಿ ಸಹಿತ ಪ್ರೋತ್ಸಾಹನಾ ಭತ್ಯೆಗಳು ನೀಡಲಾಗಲಿವೆ. ಕೇಂದ್ರ ಸರ್ಕಾರವು ಈ ಯೋಜನೆಗೆ ₹22,900 ಕೋಟಿ ವಿನಿಯೋಗಿಸಿದೆ. ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ ಮತ್ತು ಹೂಡಿಕೆಯ ಹರಿವು ಹೆಚ್ಚಳವಾಗಲಿದೆ.

ಕೇಂದ್ರ ಸರ್ಕಾರವು ಈ ವರ್ಷದ ನವೆಂಬರ್‌ನಲ್ಲಿ ₹7,172 ಕೋಟಿ ಮೊತ್ತದ 17 ಹೂಡಿಕೆ ಯೋಜನೆಗಳಿಗೆ ಅನುಮತಿ ನೀಡಿದ್ದು, ಇದರಿಂದ ಸುಮಾರು 11,800 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇವುಗಳಿಂದ ₹65,000 ಕೋಟಿ ಮೌಲ್ಯದ ಉತ್ಪನ್ನಗಳು ತಯಾರಾಗುವ ಸಾಧ್ಯತೆ ಇದೆ.

MB ಪಾಟೀಲ್ ಅವರು ಈ ಯೋಜನೆ ಮೂಲಕ ರಾಜ್ಯದಲ್ಲಿ ಉದ್ಯಮಿಕ ವಾತಾವರಣದ ಸ್ಥಿರತೆ, ತಂತ್ರಜ್ಞಾನ ಅಭಿವೃದ್ಧಿ ಮತ್ತು ಹೂಡಿಕೆ ಹೆಚ್ಚಳ ಮಾಡಬಹುದು ಎಂದು ಅಭಿಪ್ರಾಯಪಟ್ಟರು.ಈ ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ (Selva Kumar), ಆಯುಕ್ತರು ಗುಂಜನ್ ಕೃಷ್ಣ (Gunjan Krushna) ಮತ್ತು ಇತರ ಅಧಿಕಾರಿಗಳು ಭಾಗಿಯಾಗಿದ್ದರು.

MB ಪಾಟೀಲ್ ಅಧಿಕಾರಿಗಳಿಗೆ ಕೇಂದ್ರ ಮತ್ತು ಇತರ ರಾಜ್ಯಗಳ ಯೋಜನೆಗಳ ಅಧ್ಯಯನ ಮಾಡಿ, ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆಯನ್ನು ಉತ್ತೇಜಿಸುವ ರೀತಿಯಲ್ಲಿ ಕೈಗೊಳ್ಳಲು

ಸೂಚನೆ ನೀಡಿದರು. Vision Document ಅನ್ನು ಪೂರ್ಣಗೊಳಿಸುವ ಮೂಲಕ ರಾಜ್ಯದಲ್ಲಿ ಉದ್ಯೋಗ, ಹೂಡಿಕೆ, ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆ ಸಾಧ್ಯವಾಗಿದೆ ಎಂಬುದನ್ನು ಅವರು ಒತ್ತಿಹೇಳಿದರು.

ಇದನ್ನು ಓದಿ: ಹೊಸ ವರ್ಷದಂದು ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ಸಿಸಿಬಿ ಶಾಕ್ : 28 ಕೋಟಿ ಮೌಲ್ಯದ ಮಾದಕ ವಸ್ತುಗಳ ಸೀಜ್

Tags: Karnatakakarnataka employeesMB PatilNEW EMPLOYMENT

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.