ವಾರಣಾಸಿ ಡಿ 13 : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾಶಿಯ ವಾರಣಾಸಿಗೆ ಆಗಮಿಸಿ ಕಾಲ ಭೈರವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಕಾಶಿ ವಿಶ್ವನಾಥ ಧಾಮ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಆಗಮಿಸಿದ್ದು, ಕಾಲ ಭೈರವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಅವರು ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಸುಮಾರು 339 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಧಾಮದ 1 ನೇ ಹಂತವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಪಿಎಂ ಮೋದಿ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಇತರ ಪ್ರಮುಖ ನಾಯಕರು ಇಂದು ವಿಹಾರ ದೋಣಿಯಲ್ಲಿ ಕುಳಿತು ಘಾಟ್‌ಗಳಲ್ಲಿ ‘ಗಂಗಾ ಆರತಿ’ಯನ್ನು ವೀಕ್ಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಅವರು ಮಧ್ಯಾಹ್ನ 1 ಗಂಟೆಗೆ ಕಾಶಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಮತ್ತು ರೂ 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಧಾಮದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಯೋಜನೆಯ ಈ ಹಂತದಲ್ಲಿ 23 ಕಟ್ಟಡಗಳನ್ನು ಉದ್ಘಾಟಿಸಲಾಗುತ್ತದೆ. ಸುಮಾರು ಐದು ಲಕ್ಷ ಚದರ ಅಡಿಗಳಷ್ಟು ಬೃಹತ್ ಪ್ರದೇಶದಲ್ಲಿ ಇದು ಹರಡಿದೆ. ಹಿಂದಿನ ಆವರಣವು 3,000 ಚದರ ಅಡಿಗಳಲ್ಲಿ ಹರಡಿತ್ತು.
ಶ್ರೀ ಶ್ರೀ ಕಾಶಿ ವಿಶ್ವನಾಥ ಧಾಮದ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಲು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಕಾರ್ಯಕ್ರಮಕ್ಕೂ ಮುನ್ನ ಪವಿತ್ರ ಗಂಗಾ ನದಿಯಲ್ಲಿ ಮುಳುಗೆದ್ದು ಪ್ರಾರ್ಥನೆ ಸಲ್ಲಿಸಿದರು. ಜತೆಗೆ ಹಲವು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು.
ಧಾರ್ಮಿಕ ನಗರದಲ್ಲಿ ಪ್ರಧಾನಿ ಮೋದಿ ಅವರಿಗೆ ಸ್ಥಳೀಯರಿಂದ ಅದ್ದೂರಿ ಸ್ವಾಗತ ಸಿಕ್ಕಿತು. ವಾರಾಣಸಿಯ ಬೀದಿಯಲ್ಲಿ ತೆರಳಿದ ಪ್ರಧಾನಿಯ ಕಾರಿನ ಮೇಲೆ ಹೂವಿನ ದಳಗಳ ಮಳೆ ಸುರಿಸಿದರು. ಕೆಲವರು ಮೋದಿ ಅವರಿಗೆ ತಮ್ಮ ಪ್ರೀತಿಯ ಕಾಣಿಕೆಗಳನ್ನು ನೀಡಲು ಮುಗಿಬಿದ್ದರು. ಅವರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸಪಟ್ಟರು. ಅಭಿಮಾನಿಗಳು ನೀಡಿದ ಪಗಡಿ ಮತ್ತು ಅಂಗವಸ್ತ್ರವನ್ನು ಸ್ವೀಕರಿಸಿದರು. ‘ಮೋದಿ ಮೋದಿ’ ಹಾಗೂ ‘ಹರ ಹರ ಮಹದೇವ’ ಘೋಷಣೆಗಳು ಮುಗಿಲು ಮುಟ್ಟಿತ್ತು.