ಮೋದಿ ಚಮತ್ಕಾರದಿಂದ ವಲಸೆ ಕಾರ್ಮಿಕರ ಬದುಕು ದುರ್ಬರ: ಕಾಂಗ್ರೆಸ್ ಟೀಕೆ

ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020ರಲ್ಲಿ ಘೋಷಿಸಿದ ಲಾಕ್ ಡೌನ್ ಬಗ್ಗೆ ಕಾಂಗ್ರೆಸ್ ಟೀಕಿಸಿದ್ದು, ಕೇಂದ್ರ ಸರ್ಕಾರದ ಲಾಕ್‌ಡೌನ್‌ ನಿಯಮದಿಂದ ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೇಂದ್ರ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೆ ಕೈಗೊಂಡ ಲಾಕ್‌ಡೌನ್‌ನಿಂದ ಸಾಕಷ್ಟು ಕೋಲಾಹಲ ಉಂಟಾಗಿದೆ. ಮೋದಿ ಚಮತ್ಕಾರದಲ್ಲಿ ವಲಸೆ ಕಾರ್ಮಿಕರಿಗೆ ಕೆಲಸ ಇಲ್ಲದೆ ಪರದಾಡುವಂತಾಗಿದೆ. ಜತಗೆ ಬೆಲೆ ಏರಿಕೆಯಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿದ್ದು, ಜನರ ಬದುಕು
ದುರ್ಬರವಾಗಿ ಹೊಟ್ಟೆ ತುಂಬಿಸಿಕೊಳ್ಳಲು ಸಾಲಗಾರರಾಗುತ್ತಿದ್ದಾರೆ ಎಂದು ಟೀಕಿಸಿದೆ.

ಇನ್ನೂ ಭಾರೀ ಪ್ರಚಾರ ಪಡೆದಿದ್ದ 20 ಲಕ್ಷ ಕೋಟಿ ಪ್ಯಾಕೇಜ್ ಎಲ್ಲಿ ಹೋಯ್ತು ಎಂದು ಕೇಳಿದರೆ 
ಸರ್ಕಾರದ ಬಳಿ ಉತ್ತರವಿಲ್ಲ 
ಎಂದು ಕಾಂಗ್ರೆಸ್‍ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Exit mobile version