Visit Channel

ಮೋದಿ ಅವರೇ ನಿಮ್ಮ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ: ಸಿದ್ದರಾಮಯ್ಯ ವ್ಯಂಗ್ಯ

pti8-15-2017-000168b-04-1515058994

ಬೆಂಗಳೂರು, ಎ. 01: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಿರುವ ಸಚಿವ ಈಶ್ವರಪ್ಪ ಅವರ ನಡೆ ಇದೀಗ ಪ್ರತಿಪಕ್ಷಗಳ ಪಾಲಿಗೆ ದೊಡ್ಡ ಅಸ್ತ್ರವಾಗಿದೆ.‌ ಇದೇ ಅಸ್ತ್ರವನ್ನು ಪ್ರಯೋಗಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ಈ ನಿಟ್ಟಿನಲ್ಲಿ
ರಾಜ್ಯಪಾಲರು ತಕ್ಷಣ ಮಧ್ಯೆ ಪ್ರವೇಶಿಸಿ ಮುಖ್ಯಮಂತ್ರಿ ಅವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು. ಈಶ್ವರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪ ಅವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು.

ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ರಾಜ್ಯ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗಗೊಳಿಸಿದ್ದಾರೆ. ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ರಾಜ್ಯ ಬಿಜೆಪಿ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ಲೇವಡಿ ಮಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ ಬಿಡಿ ಎಂದು ಟೀಕಿಸಿದ್ದಾರೆ.

ಇನ್ನೂ, ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯ ಬಿಜೆಪ ಸರ್ಕಾರ ಅಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯದ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.