New Delhi: ಶುಕ್ರವಾರ ಸಂಜೆ ದೂರವಾಣಿ ಮೂಲಕ, ನರೇಂದ್ರ ಮೋದಿ (Modi Communicates Rishi Sunak) ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸಂಭಾಷಣೆ ನಡೆಸಿದ್ದು, ಈ ವೇಳೆ,
ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಗ್ಗೆ ಮತ್ತು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಭದ್ರತೆ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ವಿಷಯಗಳ
ಕುರಿತು ಇಬ್ಬರೂ ದೂರವಾಣಿ ಮಾತುಕತೆ (Modi Communicates Rishi Sunak) ವೇಳೆ ಚರ್ಚಿಸಿದ್ದಾರೆ.
ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಸಾಧಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಅಧಿಕಾರಾವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಿಷಿ ಸುನಕ್ ಅವರನ್ನು
ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ವಿಶೇಷವಾಗಿ ಇಸ್ರೇಲ್ (Israel) ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು
ವಿನಿಮಯ ಮಾಡಿಕೊಂಡಿದ್ದಾರೆ.
ಬ್ರಿಟನ್ ಪ್ರಧಾನಿಯೊಂದಿಗೆ ರಿಷಿ ಸುನಕ್ (Rishi Sunak) ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವ ಕುರಿತು ಚರ್ಚಿಸಲಾಗಿದೆ ಮತ್ತು ಪಶ್ಚಿಮ
ಏಷ್ಯಾದ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ಅವಕಾಶವಿಲ್ಲ ಎಂಬುದನ್ನು ನಾವು ಒತ್ತಿಹೇಳಿದ್ದೇವೆ. ನಾಗರಿಕರ ಸಾವು ಗಂಭೀರ
ಕಳವಳಕಾರಿಯಾಗಿದೆ.
ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿಗಾಗಿ ಕೆಲಸ ಮಾಡಬೇಕಾಗಿದೆ’ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ. ವ್ಯಾಪಾರ, ಹೂಡಿಕೆ,
ತಂತ್ರಜ್ಞಾನ, ಭದ್ರತೆ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಇಬ್ಬರೂ ದೂರವಾಣಿ ಮಾತುಕತೆ ವೇಳೆ ಚರ್ಚಿಸಿದ್ದಾರೆ.
ಭಾರತ ಮತ್ತು ಬ್ರಿಟನ್ (Britain) ವ್ಯಾಪಾರ-ಸಂಬಂಧಿತ ಒಪ್ಪಂದದ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿವೆ. ಇದಲ್ಲದೆ, ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ವಿಶೇಷವಾಗಿ ಇಸ್ರೇಲ್ ಮತ್ತು ಹಮಾಸ್
(Hamas) ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ಈ ಇಬ್ಬರೂ ನಾಯಕರು ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಅಮಾಯಕರ ಜೀವಹಾನಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯ
ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ ಅವರು, ಪೀಡಿತ ಪ್ರದೇಶಗಳಲ್ಲಿ ನಿರಂತರ ಮಾನವೀಯ ನೆರವಿನ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ಇದನ್ನು ಓದಿ: ಸತೀಶ್ ಜಾರಕಿಹೊಳಿ ಜತೆ ಸೀಕ್ರೆಟ್ ಮೀಟಿಂಗ್: ಮಾತುಕತೆ ಬಳಿಕ ದೆಹಲಿಗೆ ಡಿಕೆಶಿ
- ಭವ್ಯಶ್ರೀ ಆರ್.ಜೆ