ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವಲ್ಲಿ ಮೋದಿ ಸಂಪೂರ್ಣ ಸೋತಿದ್ದಾರೆ: ರಾಹುಲ್ ಗಾಂಧಿ ಕಿಡಿ

ಹೊಸದಿಲ್ಲಿ, ಮೇ. 28: ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್‌ ನಿಯಂತ್ರಣದಲ್ಲಿ ಸಂಪೂರ್ಣ ಸೋತಿದ್ದು. ಅವರ ವ್ಯಕ್ತಿತ್ವ ನಾಶವಾಗಿದೆ ಎಂದು ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಇಂದು ಫೇಸ್‌ಬುಕ್‌ ಲೈವ್ ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ಅವರು ಪೂರ್ಣ ವಿಫಲರಾಗಿದ್ದಾರೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಅವರೇ ಹೊರಬೇಕು. ಮೊದಲ ಅಲೆ ಬಗ್ಗೆ ಗೊತ್ತಿಲ್ಲದ ಕಾರಣ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ.

ಆದರೆ, ಎರಡನೇ ಅಲೆ ಬಗ್ಗೆ ತಿಳಿದಿದ್ದರೂ ಲಸಿಕೆ ನೀಡುವುದನ್ನು ವಿಳಂಬ ಮಾಡುವ ಮೂಲಕ ಕೋವಿಡ್‌ ಎಡನೇ ಅಲೆ ವ್ಯಾಪಕವಾಗಿ ಹರಡಲು ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಒಬ್ಬ ಈವೆಂಟ್‌ ಮ್ಯಾನೇರಜ್‌ ಅವರು ಒಂದಕ್ಕಿಂತ ಹೆಚ್ಚು ಕೆಲಸಗಳನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

Exit mobile version