- ರಾಜ್ಯ ಸರ್ಕಾರವನ್ನು (State Govt) ಉರುಳಿಸಲು ಪ್ರಧಾನಿ ಮೋದಿ ಪಿತೂರಿ (Modi lashed Siddu several times)
- ಹಲವಾರು ಸಲ ಸಿದ್ದರಾಮಯ್ಯ (Siddaramaiah) ವಿರುದ್ಧ ಮೋದಿ ವಾಗ್ದಾಳಿ
- ಎಚ್ಚರವಾಗಿರಿ ಎಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge)
- ಸೂಚನೆ
Kalaburagi: ಕಳೆದ ಕೆಲ ದಿನಗಳಿಂದ ಕರ್ನಾಟಕದ (Karnataka) ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ (CM) ಬದಲಾವಣೆಯ ಚರ್ಚೆ ಜೋರಾಗಿದೆ. ಇದರ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC) (Mallikarjun Kharge) ಅವರು ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ಗಂಭೀರ ಆರೋಪವೊಂದು ಮಾಡಿದ್ದಾರೆ. ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ (level employment) ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (Deputy Chief Minister DK Shivakumar) ಅವರಿಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಇತ್ತೀಚಿಗೆ ಪ್ರಧಾನಿ ನರೇಂದ್ರ (Prime Minister Narendra) ಮೋದಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೋಮವಾರ ಹರಿಯಾಣದ ಪ್ರತ್ಯೇಕ ಮೂರು ಕಡೆ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ 4 ರಷ್ಟು ಮೀಸಲಾತಿ, ಭಷ್ಟ್ರಾಚಾರ ಮತ್ತು ಬೆಲೆ ಏರಿಕೆಯನ್ನು (Corruption and price hikes) ಪ್ರಸ್ತಾಪಿಸಿದ್ದರು.

ಹರಿಯಾಣದ ಹಿಸಾರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಅದನ್ನು ಧರ್ಮಾಧಾರಿತವಾಗಿ ಹಂಚಿಕೆ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ (Congress Govt) ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಮಾಡಿದ್ದರು. ನಂತರದಲ್ಲಿ ನಂತರ, ಯಮುನಾಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ರಾಜ್ಯವನ್ನು ಭ್ರಷ್ಟಾಚಾರದಲ್ಲಿ (state is in corruption) ನಂಬರ್ 1 ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಲ್ಲದೇ, ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಾರ್ವಜನಿಕರಿಗೆ ದರ ಏರಿಕೆಯ ಮೂಲಕ ದ್ರೋಹ ಬಗೆಯಲಾಗುತ್ತಿದೆ. ಅಭಿವೃದ್ಧಿ ಚಟುವಟಿಕೆಗಳು ಪೂರ್ಣ ಸ್ಥಗಿತವಾಗಿದೆ ಎಂದು ಸರ್ಕಾರದ ಬಗ್ಗೆ ಟೀಕೆ ಮಾಡಿದ್ದರು.
ಇನ್ನು ಪ್ರಧಾನಿ ಮೋದಿಯ ವಿರುದ್ಧ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (Caste and Scheduled Tribes) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆಯೇ ಹೊರತು ಕಡಿಮೆ ಮಾಡಿಲ್ಲ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ (Das Committee) ಶಿಫಾರಸಿನ ಆಧಾರದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ ಮೂರರಿಂದ ಏಳಕ್ಕೆ ಹೆಚ್ಚಿಸಲಾಗಿದೆ.
ಹೀಗಿರುವಾಗ ಅವರಿಂದ ಕಿತ್ತುಕೊಳ್ಳುವುದೇನು ಬಂತು? ಇಂತಹ ಮೂಲಭೂತ ಮಾಹಿತಿಯೂ ಇಲ್ಲದ ಪ್ರಧಾನಿ ಮೋದಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪ (False accusation) ಮಾಡಿ ತಮ್ಮ ಘನತೆಯನ್ನು ತಾವೇ ಹಾಳುಗೆಡಹುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಹೇಳಿದ್ದರು ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ (Central and State Govt) ನಡುವೆ ಪರಸ್ಪರ ವಾಗ್ಯುದ್ದ ನಡೆಯುತ್ತಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (President Mallikarjun Kharge) ಅವರ ಹೇಳಿಕೆ ಮತ್ತೊಂದು ಚರ್ಚೆಗೆ (Modi lashed Siddu several times) ನಾಂದಿ ಹಾಡುವ ಸಾಧ್ಯತೆ ಇದೆ.