Karnataka: ಮುಂಬರುವ ಮನ್ ಕೀ ಬಾತ್ ಕಾರ್ಯಕ್ರಮ ರಾಜ್ಯದ ಪಾಲಿಗೆ ಮತ್ತಷ್ಟು ವಿಶೇಷವಾಗಿರಲಿದೆ. (Modi mann ki baat)ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಒಟ್ಟಿಗೇ ಕೂತು,
ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತುಗಳನ್ನು ಆಲಿಸಿ ಚಿಂತನೆ ನಡೆಸಲಿದ್ದೇವೆ. ಪ್ರತಿ ಬೂತ್ನಲ್ಲೂ ಈ ಕಾರ್ಯಕ್ರಮ ನಡೆಯಲಿದೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ.

ಈ ಕುರಿತು ಸರಣಿ ಟ್ವೀಟ್ಮಾಡಿರುವ ಬಿಜೆಪಿ, ವಿಜಯ ಸಂಕಲ್ಪ ಅಭಿಯಾನದಲ್ಲಿ ಒಂದು ಕೋಟಿ ಹೊಸ ಸದಸ್ಯರು(Modi mann ki baat) ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಸದಸ್ಯತ್ವ ಅಭಿಯಾನ ಸಂಪೂರ್ಣ ಆನ್ಲೈನ್ ಇರಲಿದ್ದು, ಇದಕ್ಕಾಗಿ ನಮ್ಮ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ನೋಂದಣಿ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನೀಡಲಾಗುತ್ತದೆ ಎಂದಿದೆ.
ಮತ್ತೊಂದು ಟ್ವೀಟ್ನಲ್ಲಿ, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿರವರ ನೇತೃತ್ವದಲ್ಲಿರುವ ‘ಡಬಲ್ ಎಂಜಿನ್’ ಸರ್ಕಾರಗಳ ಯೋಜನೆಗಳ ಫಲಾನುಭವಿಗಳ ಸಂಖ್ಯೆ ರಾಜ್ಯದಲ್ಲಿ ಅಧಿಕವಿದೆ.

ಆ ಎಲ್ಲಾ ಫಲಾನುಭವಿಗಳನ್ನೂ ಸಂಪರ್ಕಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಮಾಡಲಿದ್ದಾರೆ. ರಾಜ್ಯದ 10 ವಿಭಾಗಗಳ 39 ಸಂಘಟನಾತ್ಮಕ ಜಿಲ್ಲೆಗಳ 312 ಮಂಡಲಗಳಿಂದ
ನಮ್ಮ ಕಾರ್ಯಕರ್ತರು ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಲಿದ್ದಾರೆ. ರಾಜ್ಯದ ಮತದಾರರನ್ನು ವಿಜಯ ಸಂಕಲ್ಪ ಕಾರ್ಯಕ್ರಮದ ಮೂಲಕ ತಲುಪಲಾಗುತ್ತದೆ ಎಂದು ತಿಳಿಸಿದೆ.
ಮತ್ತೊಂದು ಟ್ವೀಟ್ನಲ್ಲಿ, ಇಂದು ಆರಂಭಗೊಂಡಿರುವ ವಿಜಯ ಸಂಕಲ್ಪ ಅಭಿಯಾನ ಇದೇ ತಿಂಗಳ 29ರ ವರೆಗೆ ನಡೆಯಲಿದೆ.
BJP Karnataka -Narendra modi Mann ki baat
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಅಭಿಯಾನಕ್ಕೆ ಕಲ್ಯಾಣ ಕರ್ನಾಟಕದಿಂದ ಅದ್ಧೂರಿ ಚಾಲನೆ ನೀಡಲಿದ್ದಾರೆ. ನಂತರ ಸರಣಿ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದೆ.
ಇನ್ನು ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕರ್ನಾಟಕದತ್ತ ಮುಖ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ಶಾ,
ಇದನ್ನು ಓದಿ: ಇನ್ಮುಂದೆ ರೈಲ್ವೆ ಟಿಕೆಟ್ ಅನ್ನು ಕನ್ನಡದಲ್ಲಿಯೇ ಬುಕ್ ಮಾಡಿಕೊಳ್ಳಬಹುದು
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.