ನವದೆಹಲಿ ಜ 8 : ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತ್ಯಂತ ಜನಪ್ರಿಯ ವ್ಯಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 2021ರಲ್ಲಿ ದೇಶದ ಅತ್ಯಂತ ಜನಪ್ರಿಯ ಸೆಲೆಬ್ರಿಟಿಯಾಗಿದ್ದಾರೆ ಎಂದು ಜನವರಿ 6 ರಂದು ಬಿಡುಗಡೆಯಾದ ಸಮೀಕ್ಷೆಯು ತಿಳಿಸಿದೆ. ಸಮೀಕ್ಷೆಗೆ ಒಳಪಟ್ಟು ಶೇ. 40ರಷ್ಟು ಜನರು ತಮಗೆ ಮೋದಿ ಅತ್ಯಂತ ಪ್ರಿಯ ಸೆಲೆಬ್ರಿಟಿ ಎಂದಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ನಾಯಕರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕೂಡ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಪ್ರಮುಖ ಗ್ರಾಹಕ ಡೇಟಾ ಗುಪ್ತಚರ ಕಂಪನಿ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ತಿಳಿಸಿದೆ.
ಪ್ರಧಾನಿ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಜನಪ್ರಿಯ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ.
“ವಿಶ್ವದ ನಾಯಕರ ಜನಪ್ರಿಯತೆ ಕ್ಷೀಣಿಸುತ್ತಿರುವ ಸಮಯದಲ್ಲಿ ಮೋದಿಯವರ ಜನಪ್ರಿಯತೆ ಬೆಳೆಯುತ್ತಿರುವಂತೆ ತೋರುತ್ತಿದೆ. ಈ ಸಮೀಕ್ಷೆಯು ದೇಶದ ನಾಡಿಮಿಡಿತದ ಮೇಲೆ ಮೋದಿಯವರ ಹಿಡಿತಕ್ಕೆ ಮತ್ತೊಂದು ಉದಾಹರಣೆ ಆಗಿದೆ” ಎಂದು ಗುಪ್ತಾ ಹೇಳಿದ್ದಾರೆ.