ನವದೆಹಲಿ 22: ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹೀತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ವೇಳೆ ಕರೋನಾ ವಿರುದ್ಧದ ಹೋರಾಟದಲ್ಲಿ ದೇಶವು 100 ಕೋಟಿ ಕರೋನಾ ಲಸಿಕೆ ಪ್ರಮಾಣವನ್ನು ನೀಡಿ ಇತಿಹಾಸ ನಿರ್ಮಿಸಿರುವ ಬಗ್ಗೆ ಮಾತನಾಡಬಹುದು ಎಂದು ನಿರೀಕ್ಷಿಸಲಾಗಿದೆ.
ಇಡೀ ಜಗತ್ತನ್ನೇ ತನ್ನ ಕಪಿಮುಷ್ಠಿಯಲ್ಲಿ ಬಂದಿಸಿದ್ದ ಕರೋನಾವೈರಸ್ (Coronavirus) ಎಂಬ ಸಾಂಕ್ರಾಮಿಕದ ವಿರುದ್ಧದ ವ್ಯಾಕ್ಸಿನೇಷನ್ ಅಭಿಯಾನದ ಅಡಿಯಲ್ಲಿ ಭಾರತವು 100 ಕೋಟಿ ಡೋಸ್ ಗಡಿ ದಾಟಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ದೇಶವನ್ನು ಅಭಿನಂದಿಸಿದ್ದಾರೆ. ಕಳೆದ 100 ವರ್ಷಗಳ ಅತಿದೊಡ್ಡ ಜಾಗತಿಕ ಸಾಂಕ್ರಾಮಿಕ ರೋಗವನ್ನು ಎದುರಿಸಲು ದೇಶವು ಈಗ ಬಲವಾದ ‘ರಕ್ಷಣಾ ಕವಚ’ ಹೊಂದಿದೆ ಎಂದು ಅವರು ಹೇಳಿದರು.