ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ? ಸಂಚಲನ ಮೂಡಿಸಿದ ಪ್ರಧಾನಿ ಮೋದಿ ಹೇಳಿಕೆ

Madhya Pradesh: ಸಿಎಂ ಸಿದ್ದರಾಮಯ್ಯ (Siddaramaiah) ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಗೊತ್ತಿಲ್ಲ ಎಂದು (Modi statement about Siddaramaiah) ಪ್ರಧಾನಮಂತ್ರಿ

ನರೇಂದ್ರ ಮೋದಿ (Narendra Modi) ಅಚ್ಚರಿ ಹೇಳಿಕೆ ನೀಡಿದ್ದು, ಮಧ್ಯಪ್ರದೇಶದ ಖಂಡವಾದಲ್ಲಿ ನಿನ್ನೆ(ನವೆಂಬರ್ 05) ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ

ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ.. ಎಂದು ಅವರು ಹೇಳಿದ್ದು, ಅವರ ಈ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ (Congress) ಸರ್ಕಾರ ಪತನವಾಗುತ್ತೆ. ಆದರೆ ಇದೀಗ ಸ್ವತಃ ಮೋದಿಯವರೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ

ಅನುಮಾನ ವ್ಯಕ್ತಪಡಿಸಿದ್ದು, ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದೆ. ಹಾಗಾದರೆ ಮೋದಿ ಏನೆಲ್ಲಾ ಹೇಳಿದ್ದಾರೆ ವಿವರ ಈ ಕೆಳಗಿನಂತಿದೆ.

ಅಭಿವೃದ್ಧಿ ಕುಂಠಿತಗೊಂಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಧಿಕಾರ ಹಿಡಿದಿರುವ ಕಾಂಗ್ರೆಸ್ (Congress) ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ

ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ ಮೋದಿ, ಕಾಂಗ್ರೆಸ್‌ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿದ ರಾಜ್ಯವನ್ನು

ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ. ಅಂತಹ ಸುದ್ದಿ ಇದೀಗ ಕರ್ನಾಟಕದಿಂದ ನಿಯಮಿತವಾಗಿ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarakiholi) ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರುತ್ತೇವೆ ಎಂದಿದ್ದಾರೆ. ರಾಜ್ಯ ಬಿಜೆಪಿ (BJP) ನಾಯಕರು ಮೊದಲಿನಿಂದಲೂ ಲೋಕಸಭಾ

ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಹೇಳುತ್ತಾ ಬರುತ್ತಿದ್ದು, ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಸಿದರಾಮಯ್ಯ ಮುಖ್ಯಮಂತ್ರಿ ಹುದ್ದೆಯಲ್ಲಿ ಎಷ್ಟು ದಿನ

ಮುಂದುವರೆಯುತ್ತಾರೆ ಎಂಬ ಅನುಮಾನ (Modi statement about Siddaramaiah) ವ್ಯಕ್ತಪಡಿಸಿದ್ದು ಅಚ್ಚರಿಗೆ ಕಾರಣವಾಗಿದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ (D.K.Shivakumar) ಬಣಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಇದರ ಮಧ್ಯೆ ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ.

ಇವೆಲ್ಲದರ ಮಧ್ಯೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಅಂದರೆ ಜೆಡಿಎಸ್ ಶಾಸಕರು ಬೆಂಬಲ ಕೊಡಲಿದ್ದಾರೆ ಎಂದು ಕುಮಾರಸ್ವಾಮಿ (Kumaraswamy) ಘೋಷಿಸಿದ್ದಾರೆ. ಈ ಮೂಲಕ .

ಕಾಂಗ್ರೆಸ್​ಅನ್ನು ಒಡೆಯು ಅಸ್ತ್ರ ಪ್ರಯೋಗಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ (BJP) ನಾಯಕರ ಈ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬೇರೆ ನಾಯಕರು ಈ ರೀತಿ ಹೇಳಿಕೆ ನೀಡಿದರೆ ಅಷ್ಟು ಏನು

ಅನ್ನಿಸುವುದಿಲ್ಲ. ಆದರೆ ಪ್ರಧಾನಮಂತ್ರಿಗಳ ಬಾಯಲ್ಲೇ ಈ ರೀತಿ ಮಾತುಗಳು ಬಂದಿರುವುದು ಅಚ್ಚರಿ ಮೂಡಿಸಿದೆ.

ಹಾಗಾದ್ರೆ, ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮಹಾರಾಷ್ಟ್ರದ ರೀತಿಯ ರಾಜಕೀಯ ಬೆಳವಣಿಗೆಗಳು ಕರ್ನಾಟಕದಲ್ಲಿ ಆಗಲಿದೆಯಾ? ಇಲ್ಲ ರಾಷ್ಟ್ರಪತಿ ಆಡಳಿ ಬರುತ್ತಾ?

ಹೀಗೆ ಹಲವು ಪ್ರಶ್ನೆಗಳು ಮೂಡಿವೆ.

ಇದನ್ನು ಓದಿ: ಬಿಎಂಟಿಸಿ ಕಲೆಕ್ಷನ್​​ಗೆ ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಯಿಂದ ಭಾರಿ ಹೊಡೆತ

Exit mobile version