ಬಿಜೆಪಿ(BJP) ನೇತೃತ್ವದ ಎನ್‍ಡಿಎ(NDA) ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ(President Candidate) ಜಾರ್ಖಂಡ್‍ನ(Jharkhand) ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು(Draupadi Murmu) ಅವರನ್ನು ಆಯ್ಕೆ ಮಾಡಲಾಗಿದೆ. ನಿನ್ನೆ ವಿಪಕ್ಷಗಳು ದೆಹಲಿಯಲ್ಲಿ(New Delhi) ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾವನ್ನು ಅಭ್ಯರ್ಥಿಯಾಗಿ ಘೋಷಿಸಿದ್ದವು. ಇದೀಗ ಎನ್‍ಡಿಎ ಬುಡಕಟ್ಟು ಸಮುದಾಯಕ್ಕೆ(Tribal Community) ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ.

ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾದರೆ, ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಸಮುದಾಯದ ಮಹಿಳೆಯಾಗಲಿದ್ದಾರೆ. ಇನ್ನು ಈ ಕುರಿತು ಟ್ವೀಟ್(Tweet) ಮಾಡಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು, ದ್ರೌಪದಿ ಮುರ್ಮು ಅವರು, ಸಮಾಜ ಸೇವೆಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದಾರೆ. ಜೊತೆಗೆ ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಅವರು ಭಾರತದ ಶ್ರೇಷ್ಠ ರಾಷ್ಟ್ರಪತಿಯಾಗಲಿದ್ದಾರೆ ಎಂದಿದ್ದಾರೆ.
ದ್ರೌಪದಿ ಮುರ್ಮು ಅವರು ಬಡವರು, ದೀನದಲಿತರು, ಆದಿವಾಸಿಗಳು ಮತ್ತು ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ ಮತ್ತು ಅತ್ಯುತ್ತಮ ಗವರ್ನಟೋರಿಯಲ್ ಅಧಿಕಾರವನ್ನು ಹೊಂದಿದ್ದರು. ಹೀಗಾಗಿ ಅವರು ಭಾರತದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು 1997 ರಲ್ಲಿ ದ್ರೌಪದಿ ಮುರ್ಮು ಅವರು ರಾಯರಂಗ್‍ಪುರ ಕೌನ್ಸಿಲರ್ ಆಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು,

ನಂತರ ಒಡಿಶಾದಿಂದ(Odisha) ಎರಡು ಬಾರಿ ಬಿಜೆಪಿಯಿಂದ ಶಾಸಕಿಯಾದರು. ರಾಯರಂಗ್‍ಪುರ ರಾಷ್ಟ್ರೀಯ ಸಲಹಾ ಮಂಡಳಿಯ ಉಪಾಧ್ಯಕ್ಷೆಯಾಗಿ, ಬಿಜು ಜನತಾ ದಳ ಮತ್ತು ಬಿಜೆಪಿ ಮೈತ್ರಿಕೂಟದ ಸರ್ಕಾರದಲ್ಲಿ ಸಾರಿಗೆ ಸಚಿವೆಯಾಗಿ, 2015 ರಿಂದ 2021ರ ವರೆಗೆ ಜಾರ್ಖಂಡ್‍ನ 9ನೇ ರಾಜ್ಯಪಾಲೆಯಾಗಿ ಅವರು ಸೇವೆ ಸಲ್ಲಿಸಿದ್ದಾರೆ.