ಪ್ರಧಾನಿ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಈ ಬಗ್ಗೆ ಟ್ವಿಟರ್ ಸಂಸ್ಥೆ ಸ್ಪಷ್ಟಪಡಿಸಿದೆ. ಮೋದಿ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು, ಕ್ರಿಪ್ಟೋಕರೆನ್ಸಿ ಮೂಲಕ ಪಿಎಂ ನ್ಯಾಷನಲ್ ರಿಲೀಫ್ ಫಂಡ್‌ಗೆ ದೇಣಿಗೆ ನೀಡಬೇಕೆಂದು ಕೇಳಿ ಸರಣಿ ಟ್ವೀಟ್ಗಳನ್ನ ಮಾಡಿದ್ದರು.

ಇದಾದ ಬಳಿಕ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಗಮನಕ್ಕೆ ಬಂದಿದೆ. ಸದ್ಯ ಟ್ವಿಟರ್ ಖಾತೆಯನ್ನು ಮರಳಿ ಪಡೆಯಲಾಗುತ್ತಿದ್ದು, ಹ್ಯಾಕ್ ಮಾಡಿ ಹಾಕಿಲಾಗಿದ್ದ ಸರಣಿ ಟ್ವೀಟ್ಗಳನ್ನ ಡಿಲೀಟ್ ಮಾಡಲಾಗಿದೆ.

ಮೋದಿ ಅವರ ಟ್ವಿಟರ್ ಅಕೌಂಟ್ ಹ್ಯಾಕ್ ಆಗಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಟ್ಟಿಟರ್ ಸಂಸ್ಥೆ, ಮೋದಿ ಅವರ ಖಾತೆ ಹ್ಯಾಕ್ ಆಗಿರುವುದು ತಮ್ಮ ಗಮನಕ್ಕೆ ಬಂದಿದೆ. ಅದನ್ನು ಸುರಕ್ಷಿತಗೊಳಿಸಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ.

ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಹೆಚ್ಚುವರಿ ಖಾತೆಗಳನ್ನೂ ಹ್ಯಾಕ್ ಮಾಡಲಾಗಿದೆಯಾ ಎಂಬುದು ತಿಳಿದುಬಂದಿಲ್ಲ ಎಂದೂ ಟ್ವಿಟರ್ ಸಂಸ್ಥೆಯ ವಕ್ತಾರರೊಬ್ಬರು ಹೇಳಿಕೆ ನೀಡಿದ್ಧಾರೆ. ಆದರೆ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್‍ ಆಗಿರುವ ಕುರಿತಂತೆ ಪ್ರಧಾನಿ ಕಾರ್ಯಾಲಯದಿಂದ ಇನ್ನೂ ಅಧಿಕೃತ ಹೇಳಿಕೆ ಬಂದಿಲ್ಲ.

Exit mobile version