ನವದೆಹಲಿ, ಜೂ. 07: ಭಾರತ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.
ಕಳೆದ ವರ್ಷ ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ಬಳಿಕ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಅನೇಕ ಬಾರಿ ಮಾತನಾಡಿದ್ದಾರೆ. ಅಲ್ಲದೆ ಸಂದರ್ಭಕ್ಕೆ ತಕ್ಕಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಲೇ ಬಂದಿದ್ದಾರೆ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ. ಹಾಗಿದ್ದರೂ ಸಂಜೆ 5ಕ್ಕೆ ಯಾವ ವಿಷಯದ ಕುರಿತು ಪ್ರಧಾನಿ ಮೋದಿ ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲವೆನಿಸಿದೆ.