ಗುಜರಾತ್‌ನ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು 132 ಜನರ ದಾರುಣ ಸಾವು!

Ahemedabad : ಗುಜರಾತ್‌ನ(Gujarat) ಮೋರ್ಬಿಯಲ್ಲಿ(Morbi Bridge Collapse) ನವೀಕರಣಗೊಂಡ ಕೆಲವೇ ದಿನಗಳಲ್ಲಿ ತೂಗು ಸೇತುವೆ ಕುಸಿದು 132 ಜನರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಯಲ್ಲಿ ಕೇಬಲ್ ಸೇತುವೆ ಕುಸಿದು 132 ಜನರು ಸಾವನ್ನಪ್ಪಿದ್ದು, ಸುಮಾರು 177 ಜನರನ್ನು ರಕ್ಷಿಸಲಾಗಿದೆ.

19 ಜನರು ಚಿಕಿತ್ಸೆಯಲ್ಲಿದ್ದಾರೆ. ಸೇನೆ, ನೌಕಾಪಡೆ, ವಾಯುಪಡೆ, ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಗುಜರಾತ್ ಮಾಹಿತಿ ಇಲಾಖೆ ತಿಳಿಸಿದೆ.

ಇನ್ನು ಮಚ್ಚು ನದಿಗೆ ಬಿದ್ದವರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಐದು ತಂಡಗಳು ರಾತ್ರಿಯಿಡಿ ಶ್ರಮಿಸುತ್ತಿವೆ.

ಇನ್ನೊಂದೆಡೆ ಭಾರತೀಯ ಸೇನೆಯು ರಾತ್ರಿ 3ರ ಸುಮಾರಿಗೆ ಇಲ್ಲಿಗೆ ತಲುಪಿದೆ. ನಾವು ಶವಗಳನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದೇವೆ.

ಇದನ್ನೂ ಓದಿ : https://vijayatimes.com/chethan-ahimsa-over-head-bush/

ಎನ್‌ಡಿಆರ್‌ಎಫ್‌ನ ತಂಡಗಳು ಸಹ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ಭಾರತೀಯ ಸೇನೆಯ ಮೇಜರ್ ಗೌರವ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳ ತುರ್ತು ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

ಹಲವಾರು ಶವಗಳನ್ನು ನದಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳನ್ನು ಮೋರ್ಬಿ ಸಿವಿಲ್ ಆಸ್ಪತ್ರೆಗೆ ರವಾನಿಸಲಾಯಿತು.

ಇನ್ನು ಘಟನೆ ನಡೆದ ನಂತರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಕ್ಷಣಾ ಕಾರ್ಯಾಚರಣೆಗಳು ಮತ್ತು ವೈದ್ಯಕೀಯ ಸೇವೆಗಳನ್ನು ಮೇಲ್ವಿಚಾರಣೆ ಮಾಡಲು ಮೊರ್ಬಿಗೆ ಆಗಮಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಗಿಯುವವರೆಗೂ ಮುಖ್ಯಮಂತ್ರಿಗಳು ಮೋರ್ಬಿಯಲ್ಲಿಯೇ ಬಿಡಾರ ಹೂಡುವ ಸಾಧ್ಯತೆ ಇದೆ.

https://youtu.be/w3nJxaDhgtM Ms Vijayalakshmi Shibaruru Live | ಪ್ರೆಸ್‌ನವರಿಗೆ ಸಿಎಂ ಲಂಚ!

ಗುಜರಾತ್ ಮತ್ತು ರಾಜಸ್ಥಾನಕ್ಕೆ(Rajasthan) ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಮೊರ್ಬಿ ಕೇಬಲ್ ಸೇತುವೆ ಕುಸಿತದ ಘಟನೆಯ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ರೋಡ್‌ಶೋ ಅನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಘಟನೆ ಸ್ಥಳಕ್ಕೆ ಅವರು ಭೇಟಿ ನೀಡುವ ಸಾಧ್ಯತೆ ಇದೆ.

Exit mobile version