ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.77 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ

ನವದೆಹಲಿ, ಮೇ. 26: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.77 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಯ ಡೋಸ್ಗಳು ಲಭ್ಯವಿದೆ. ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿಯಾಗಿ 1 ಲಕ್ಷ ಡೋಸ್ಗಳನ್ನು ನೀಡಲಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುವ ಮತ್ತು ರಾಜ್ಯಗಳು ನೇರವಾಗಿ ಖರೀದಿ ಮಾಡುವ ವ್ಯವಸ್ಥೆ ಮೂಲಕ ಇದುವರೆಗೆ 22 ಕೋಟಿಗೂ ಹೆಚ್ಚು(22,00,59,880) ಡೋಸ್ಗಳನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಯನ್ನು ಒದಗಿಸಲಾಗುತ್ತದೆ ಎಂದು ಸಚಿವಾಲಯವು ಹೇಳಿದೆ.

ಕೇಂದ್ರ ಸರ್ಕಾರದ ನೇತೃತ್ವದೊಂದಿಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಲಿವೆ. ಈ ಹೋರಾಟದ ಪ್ರಮುಖ ಐದು ಕಾರ್ಯತಂತ್ರಗಳಲ್ಲಿ ಲಸಿಕೆ ಅಭಿಯಾನವು ಒಂದಾಗಿದೆ ಎಂದು ಸಚಿವಾಲಯವು ತಿಳಿಸಿದೆ.

Exit mobile version