ದೆಹಲಿ, ಏ. 19: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು ಕಳೆದ 24ಗಂಟೆಗಳಲ್ಲಿ 2,59,170 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಇನ್ನೂ ಕಳೆದ ೨೪ ಗಂಟೆಯಲ್ಲಿ 1,761 ರೋಗಿಗಳು ಮೃತ ಪಟ್ಟಿದ್ದು, 1,54,761 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿರುವ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 1,53,21,089 ಆಗಿದೆ. ಈವರೆಗೆ 1,80,530 ಮಂದಿ ಮೃತಪಟ್ಟಿದ್ದು 1,31,08,582 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನೂ ವಿವಿಧ ಆಸ್ಪತ್ರೆಗಳಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 20,31,977 ಆಗಿದ್ದು, ಇದುವರೆಗೆ 12,71,29,113 ಮಂದಿ ಕೊವಿಡ್ ಲಸಿಕೆ ಪಡೆದುಕೊಂಡಿದ್ದಾರೆ.