ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣ

Bengaluru: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ (most beautiful KIAL Terminal2 ) ನಿಲ್ದಾಣದ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಗೌರವಕ್ಕೆ

ಪಾತ್ರವಾಗಿದ್ದು, ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೋದ ಪ್ರತಿಷ್ಠಿತ ವಾಸ್ತುಶಿಲ್ಪ ಸ್ಪರ್ಧೆಯ ಪ್ರಿಕ್ಸ್ ವರ್ಸೈ (Prix ​​Versailles is UNESCO’s prestigious architectural competition)

ಗೌರವಕ್ಕೆ ಬೆಂಗಳೂರು ವಿಮಾನ ನಿಲ್ದಾಣ (Bangalore Airport) ಪಾತ್ರವಾಗಿದೆ.

ಟರ್ಮಿನಲ್ 2ನಲ್ಲಿರುವ ಒಳಾಂಗಣ ವಿನ್ಯಾಸಕ್ಕಾಗಿ ಈ ವರ್ಷದ ಗೌರವ ಸಿಕ್ಕಿರುವುದಲ್ಲದೇ ಈ ಗೌರವಕ್ಕೆ ಪಾತ್ರವಾದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಯೂ ಈಗ ಕೆಐಎಎಲ್‌ಗೆ (KIAL)

ಸಿಕ್ಕಿದ್ದು, ಪ್ಯಾರಿಸ್‌ ಮೂಲದ ಪ್ರಿಕ್ಸ್ ವರ್ಸೈಲ್ಸ್ 2015ರಲ್ಲಿ ಸ್ಥಾಪಿಸಲಾಗಿದೆ. ವಿಮಾನ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು, ಕ್ಯಾಂಪಸ್‌ಗಳು ಮತ್ತು ಪ್ರಯಾಣಿಕರ ನಿಲ್ದಾಣಗಳು ಸೇರಿದಂತೆ ಹಲವಾರು

ವಿಭಾಗಗಳಲ್ಲಿ ಪ್ರಶಸ್ತಿಯನ್ನು (most beautiful KIAL Terminal2) ನೀಡುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು (PM Narendra Modi) ಕಳೆದ ವರ್ಷದ ನವೆಂಬರ್‌ನಲ್ಲಿ ಟರ್ಮಿನಲ್‌ 2 ಉದ್ಘಾಟಿಸಿದ್ದರು. ಈ ವರ್ಷದ ಜನವರಿ 15 ದಿಂದ ದೇಶೀಯ ಕಾರ್ಯಾಚರಣೆ

ಆರಂಭಗೊಂಡಿತ್ತು. ಸೆಪ್ಟೆಂಬರ್‌ 12 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ (International flight) ಜೊತೆ ದೇಶೀಯ ಸೇವೆ ನೀಡುವ ಏರ್‌ ಏಷ್ಯಾ, ಏರ್‌ ಇಂಡಿಯಾ, ಸ್ಟಾರ್‌ ಏರ್‌,

ವಿಸ್ತಾರಾ ಕಂಪನಿಗಳ (Air Asia, Air India, Star Air, Vistara) ವಿಮಾನ ಕಾರ್ಯಾಚರಣೆ ಟರ್ಮಿನಲ್‌ 2 ನಿಂದ ನಡೆಯುತ್ತಿದೆ.

ಏರ್‌ಪೋರ್ಟ್‌ ಒಳಾಂಗಣವು ಸಂಪೂರ್ಣ ವುಡ್ ಡಿಸೈನ್, ಹಸಿರಿನೊಂದಿಗೆ ವಿನ್ಯಾಸಗೊಂಡಿದ್ದು, ಹೊಸದಾಗಿ ಟರ್ಮಿನಲ್ 2 ಎರಡನೇ ರನ್‌ ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ

ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಲಿವೆ. ಗ್ರೌಂಡ್ ಎಸಿ ಆಟೋಮ್ಯಾಟಿಕ್‌ ಪಾಸ್‍ಪೋರ್ಟ್ ವೆರಿಫಿಕೇಷನ್, ಆಕರ್ಷಕ ಫ್ಲೋರಿಂಗ್ (Ground AC

Automatic Passport Verification, Attractive Flooring) ಹಾಗೂ ಅತ್ಯಾಧುನಿಕ ಟೆಕ್ನಾಲಜಿಯನ್ನು ಹೊಂದಿದೆ.

ವಿಮಾನ ಪ್ರಯಾಣಿಕರು ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ಸಂದರ್ಭದಲ್ಲಿ ವ್ಯಕ್ತಿಯನ್ನು ಗುರುತಿಸಲು ಫೇಸ್ ರೆಕಗ್ನಿಷನ್, ಫಿಂಗರ್ ಪ್ರಿಂಟ್ ಸೆನ್ಸರ್ ಸೌಲಭ್ಯವಿದೆ. ಕೆಐಎಎಲ್ ನೂತನ ಟರ್ಮಿನಲ್‍ನಲ್ಲಿ

ವಿಮಾನ ನಿಲ್ದಾಣದಲ್ಲಿನ ಸೌಲಭ್ಯಗಳ ಬಗ್ಗೆ ಪ್ಯಾಸೆಂಜರ್‌ಗಳಿಗೆ ಮಾಹಿತಿ ಪಡೆಯಲು ಇನ್ ಬಿಲ್ಟ್ ಸ್ಮಾರ್ಟ್ ಫೋನ್ ಅಪ್ಲಿಕೇಷನ್ (In built smart phone application) ತಂತ್ರಜ್ಞಾನ ರೂಪಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದ್ದು, ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಂಪಸ್‌ ಅನ್ನು

ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು 100% ಸುಸ್ಥಿರತೆಯೊಂದಿಗೆ ರಚಿಸಲಾಗಿದೆ.

ಟರ್ಮಿನಲ್-2 ಅನ್ನು ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದೆ. ಬೆಂಗಳೂರನ್ನು ಭಾರತದ ʼಗಾರ್ಡನ್‌ ಸಿಟಿʼಎಂದು

ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ. ಪ್ರಯಾಣಿಕರಿಗೆ ಉದ್ಯಾನವನದ ಅನುಭವ ನೀಡಲು ಕೃತಕ ಮರಗಿಡಗಳು, ಹಕ್ಕಿಗಳ ಕಲರವ-ಚಿಲಿಪಿಲಿ ನಾದವನ್ನು ಇಲ್ಲಿ ಕೇಳಬಹುದು.

ಇದನ್ನು ಓದಿ: ಹೊಸದಾಗಿ ಆಧಾರ್ ಕಾರ್ಡ್ ಮಾಡಿಸುತ್ತಿದ್ದೀರಾ? ಇನ್ಮುಂದೆ ಪಾಸ್​ಪೋರ್ಟ್ ಮಾದರಿ ವೆರಿಫಿಕೇಶನ್ ಪ್ರಕ್ರಿಯೆ ಇರಲಿದೆ.

Exit mobile version