Visit Channel

ಸಚಿವ ಸ್ಥಾನಕ್ಕಾಗಿ ರೇಣುಕಾಚಾರ್ಯ ಬಿಗಿ ಪಟ್ಟು

renukacharya

ದಾವಣಗೆರೆ ಜ 24 : ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿಗಿ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇಂಥ ಸಚಿವರು ಬೇಕಾ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ವಿಚಾರವನ್ನು ಶಾಸಕ ಯತ್ನಾಳ್ ಜತೆ ಮಾತಾಡಿದ್ದೇನೆ. ವಿಳಂಬ ಮಾಡಿ ನಮಗೆ ಸಚಿವ ಸ್ಥಾನ ಕೊಟ್ಟರೆ ಉಪಯೋಗವಿಲ್ಲ. ಬಿ.ವೈ. ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಲ್ಲ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಸಚಿವ ಸಂಪುಟದಲ್ಲಿ ಈಗ 4 ಸಚಿವ ಸ್ಥಾನಗಳು ಖಾಲಿ ಇವೆ. ಹಲವು ಬಾರಿ ಸಚಿವರಾದವರು ತಾವೇ ರಾಜೀನಾಮೆ ನೀಡಲಿ. ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಾರ್ಚ್‌ನಲ್ಲಿ ಸಂಪುಟ ವಿಸ್ತರಣೆ ಬೇಡ, ಈಗಲೇ ಮಾಡಲಿ. ಅಗತ್ಯ ಬಿದ್ದರೆ ದೆಹಲಿಗೂ ಹೋಗುತ್ತೇವೆ. ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒಂದಾಗಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟು ನೋಡಲಿ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.