ಬೆಂಗಳೂರು, ಜು. 20: ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಕೇಳಿ ಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ಬಿ.ಎಸ್. ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿರುವ ಸಿಎಂ ಬದಲಾವಣೆ ಕುರಿತಂತೆ ಪ್ರತಿಕ್ರಿಯಿಸಿರುವ ಎಂ.ಬಿ. ಪಾಟೀಲ್, ಬಿಜೆಪಿಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಇದರಿಂದ ಇಡೀ ಲಿಂಗಾಯಿತ ಸಮುದಾಯಕ್ಕೆ ನೋವಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಪರ ಬ್ಯಾಟ್ ಬೀಸಿರುವ ಎಂ.ಬಿ. ಪಾಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ @BSYBJP ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ.
— M B Patil (@MBPatil) July 19, 2021