Raj Bhavan Chalo: DCM DK Shivakumar called on Raj Bhavan Chalo on August 31
Bengaluru: ಕಾಂಗ್ರೆಸ್ ವತಿಯಿಂದ ಆಗಸ್ಟ್ (August) 31ರಂದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ‘ರಾಜಭವನ ಚಲೋ’ (Rajabhavan Chalo) ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಆಗಸ್ಟ್ 31ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿ, ಎಲ್ಲಾ ಸಚಿವರು, ಕಾಂಗ್ರೆಸ್ನ (Congress) ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ” ಎಂದು ನಿನ್ನೆ (ಆ.27) ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೇಳಿದರು.
ರಾಜ್ಯಪಾಲರು ತರಾತುರಿಯಲ್ಲಿ ಸಿಎಂ ಅವರ ವಿರುದ್ಧ ಪ್ರಾಸಿಕ್ಯೂಷನ್’ಗೆ (Prosecution) ಅನುಮತಿ ನೀಡಿದ್ದಾರೆ. ಇದಕ್ಕೆ ನನ್ನ ಅಧ್ಯಕ್ಷತೆಯಲ್ಲಿ ನಡೆದ ಕಳೆದ ಸಚಿವ ಸಂಪುಟ ಸಭೆಯಲ್ಲಿ ನಾವು ರಾಜ್ಯಪಾಲರಿಗೆ ಕೆಲವು ಸಲಹೆಗಳನ್ನು ನೀಡಿದ್ದೇವೆ. ತನಿಖೆ ಇಲ್ಲದೆಯೇ ಈ ರೀತಿ ಆದೇಶ ಕೊಡುವುದು ತಪ್ಪು. ಇದನ್ನು ನಾವು ಖಂಡಿಸುತ್ತೇವೆ. ಆಗಸ್ಟ್ 31ರಂದು ರಾಜಭವನ ಚಲೋ ನಡೆಸಿ, ವಿಧಾನಸೌಧದ (Vidhanasoudha) ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು.
ಹೆಚ್ಡಿಕೆ ವಿರುದ್ದ ಆಕ್ರೋಶ
ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು. ಅವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸು ದಾಖಲಾಗಿದೆ. 2023ರ ನವೆಂಬರ್ (November) 21ರಂದು ಲೋಕಾಯುಕ್ತ ಎಸ್ಐಟಿ (SIT) ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್ಐಟಿ ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy), ನಾನು ಸಹಿಯೇ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು” ಎಂದು ಡಿಕೆಶಿ (DKS), ಕುಮಾರಸ್ವಾಮಿ ವಿರುದ್ದ ಕಿಡಿಕಾರಿದರು.
“ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ದಿದ್ದರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ? ಎಂದು ಪ್ರಶ್ನಿಸಿದರು.
ನಾನು ಅವರ ಕುಟುಂಬದ ಆಸ್ತಿ ಬಗ್ಗೆ ಅನೇಕ ಪ್ರಶ್ನೆ ಕೇಳಿದ್ದೆ. ಈವರೆಗೂ ಅವರು ಅದಕ್ಕೆ ಉತ್ತರ ನೀಡಿಲ್ಲ. ನನ್ನ ಕುಟುಂಬದ ಸುದ್ದಿಗೆ ಬರುತ್ತೀಯಾ? ಎಂದೆಲ್ಲಾ ಅವರು ಕಿಡಿಕಾರಿದ್ದಾರೆ. ಅವರು ಕೂಡ ಯಾರ ಕುಟುಂಬದ ವಿಚಾರಕ್ಕೆ ಹೋಗಿದ್ದಾರೆ ಎಂಬುವುದನ್ನು ಹೇಳಬೇಕು. ಅವರು ಹೇಗೆ ಬೇರೆಯವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೋ, ಅದೇ ರೀತಿ ಬೇರೆಯವರು ಅವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೆ” ಎಂದು ವಾಗ್ದಾಳಿ ನಡೆಸಿದರು.
Muda Case-Raj Bhavan Chalo Kannada Trending
Bengaluru: On August 31, on behalf of the Congress, a ‘Rajabhavan Chalo’ was organized by the Congress demanding permission to hear the cases pending before the Governor including Union Minister HD Kumaraswamy, former Ministers Murugesh Nirani, Janardhana Reddy, Sasikala Jolla. DK Sivakumar said.
On August 31 at 10 am, a petition will be submitted to the Governor from the Gandhi statue of Vidhansouda to the Raj Bhavan. “The Chief Minister, all ministers, Congress MLAs, Legislative Council members and MPs will be present,” he said while holding a press conference at the KPCC office yesterday (August 27).
The governor has hastily given permission for prosecution against the CM. In the last Cabinet meeting chaired by me, we gave some suggestions to the Governor. It is wrong to issue such an order without investigation. We condemn this. On 31st August, we will hold a Raj Bhavan Chalo and go to the Raj Bhavan from the Vidhanasoudha statue of Gandhi and request that any pending prosecutions should be implemented. In this context, all MLAs, Ministers and Council members should be involved.
Outrage against HDK
Our Big Brother Kumaraswamy Sacha is working. A case was registered against him 10 years ago. On November 21, 2023, Lokayukta SIT officials also wrote a letter to the Governor. We are not twisting anything. The SIT submitted a 218-page investigation report to the Governor. Union Minister H D Kumaraswamy, who is known for his truthfulness, has said that I have not signed it. I was surprised to see his statement,” DKS (DKS) lashed out at Kumaraswamy.
It is not his signature and someone has forged it. Why didn’t they file a complaint that they had forged the signature? If the signature is forgery, should I file a complaint with at least one PC? He questioned.
I asked many questions about his family property. So far they have not answered it. Coming to my family news? He is always hot. He should also tell whose family he went to. “The same way they go into other people’s family issues, others go into their family issues,” he said.