Visit Channel

ಮಹಾಕವಿ ಸ್ಕ್ರಿಪ್ಟ್ ಪೂಜೆ

WhatsApp Image 2021-03-23 at 6.42.07 PM

ಕನ್ನಡದ ಪ್ರಥಮ ರಾಷ್ಟ್ರಕವಿ ಗೋವಿಂದಪೈ ಬಯೋಪಿಕ್ ಸ್ಕ್ರಿಪ್ಟ್ ಪೂಜಾ ಕಾರ್ಯಕ್ರಮ ಇಂದು ಬೆಳಿಗ್ಗೆ ನೆರವೇರಿತು.

ಗೋವಿಂದ ಪೈ ಅವರ ತವರು ಗಡಿನಾಡು ಮಂಜೇಶ್ವರದವರೇ ಆದ ನಟ, ನಿರ್ಮಾಪಕ ರಘುಭಟ್ ತನ್ನ ಲಕ್ಷ್ಮೀ ಗಣೇಶ್ ಪ್ರೊಡಕ್ಷನ್ ‌ನಲ್ಲಿ ಮಹಾಕವಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಅವರ ಪತ್ನಿ ಸುಗುಣ ರಘುಭಟ್ ಈ ಸಿನಿಮಾ ಮೂಲಕ ನಿರ್ಮಾಪಕಿಯಾಗಿ ಸಿನಿರಂಗದ ಸೇವೆಗೆ ಎಂಟ್ರಿ ಕೊಡುತ್ತಿರುವುದು ಮತ್ತೊಂದು ವಿಶೇಷ. ಸಿನಿಮಾ ಪತ್ರಕರ್ತರಾಗಿ , ಸಾಹಿತಿಯಾಗಿ ಚಿರಪರಿಚಿತರಾಗಿರುವ ಗಣೇಶ್ ಕಾಸರಗೋಡು ಮಹಾಕವಿಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮಂಜೇಶ್ವರದವರೇ ಆದ ಜಯರಾಂ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ನಿರ್ದೇಶಕರು ಸದ್ಯದಲ್ಲೇ ತಂಡ ಕೂಡಿಕೊಳ್ಳಲಿದ್ದಾರೆ. ಸ್ಟಾರ್ ನಟರೊಬ್ಬರು ಗೋವಿಂದ ಪೈ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ಶನೀಶ್ವರ ದೇವಾಲಯದಲ್ಲಿ ಪೂಜೆ ಬಳಿಕ ಗೋವಿಂದ ಪೈ ಅವರ ನಿವಾಸದಲ್ಲಿ ಸಮಾರಂಭ ಜರುಗಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಪೊಲೀಸ್ ಕಮಿಷನರ್ ಮಾತನಾಡಿ, ರೌಡಿಸಂ‌ ಸಿನಿಮಾಗಳಿಗಿಂತ ಇಂತಹ ಒಳ್ಳೆಯ ಸಂದೇಶ ನೀಡುವ ಸಿನಿಮಾಗಳು ಬರಬೇಕು. ಸಮಾಜಕ್ಕೆ ಕೊಡುಗೆ ನೀಡಿದವರ ಜೀವನಗಾಥೆ ಎಲ್ಲರಿಗೂ ಆದರ್ಶ. ಗೋವಿಂದ ಪೈ ಅವರ ಬಯೋಪಿಕ್ ನಿರ್ಮಿಸುತ್ತಿರುವ ರಘುಭಟ್ ಹಾಗೂ ಇಡೀ‌ ತಂಡಕ್ಕೆ ಶುಭವಾಗಲಿ ಎಂದರು.

ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಚಿತ್ರತಂಡವನ್ನು ಆಶೀರ್ವದಿಸಿದರು. ಮಂಜೇಶ್ವರದ ವಿನ್ಸೆಂಟ್ ಚರ್ಚ್ ನ ವಿನೋದ್ ಸಾಲ್ಡಾನ್ಹಾ ಮಾತನಾಡಿ, ಗೋವಿಂದ ಪೈ ಅವರು 22 ಭಾಷೆಗಳನ್ನು ಬಲ್ಲವರಾಗಿದ್ದರು. ಸರ್ವಧರ್ಮ ಸಹಿಷ್ಣುವಾಗಿದ್ದರು.‌ಅಂತಹ ಮಹಾನ್ ವ್ಯಕ್ತಿ ನಮ್ಮವರು ಎಂಬುದೇ ಹೆಮ್ಮೆ ಎಂದು ಹೇಳಿದರು.
ಮಹಾಕವಿ ಕಥೆ , ಚಿತ್ರಕಥೆ ಮತ್ತು ಸಂಭಾಷಣೆಕಾರ ಗಣೇಶ್ ಕಾಸರಗೋಡು ಮಾತನಾಡಿ, ಸಿನಿಮಾಕ್ಕೆ ಬರೆಯುವ ಅವಕಾಶ ಕೊಟ್ಟ ರಘುಭಟ್ ಅವರಿಗೆ ಧನ್ಯವಾದಗಳು.‌ ಇಡೀ ತಂಡವಾಗಿ ಒಂದೊಳ್ಳೆ ಸಿನಿಮಾ ನಿರ್ಮಾಣವಾಗುತ್ತಿದ್ದು, ಸಿನಿಮಾ ಅದ್ಭುತವಾಗಿ ಮೂಡಿಬರಬೇಕೆಂಬುದು ನನ್ನಾಸೆ. ಆ ನಿಟ್ಟಿನಲ್ಲಿ ನಾನೂ ಶ್ರಮಿಸುತ್ತೇನೆ ಎಂದರು.

ನಟ ವಿಕ್ರಂ ಸೂರಿ ಮಾತನಾಡಿ, ಕಮರ್ಷಿಯಲ್ ಸಿನಿಮಾ ಜಗತ್ತಿನಲ್ಲಿ ರಘುಭಟ್ ಇಂತಹ ವಿಭಿನ್ನ ಪ್ರಯತ್ನ, ಸಾಹಸದ ಮೂಲಕ ಹೊಸದೇನಾದರು ಮಾಡಬೇಕು ಎಂಬ ಉತ್ಸಾಹದಲ್ಲಿದ್ದಾರೆ. ದುಡ್ಡು ಮಾಡುವ ಇರಾದೆ ಇದ್ದಿದ್ದರೆ ಕಮರ್ಷಿಯಲ್ ಸಿನಿಮಾಗಳಿಗೇ ಬಂಡವಾಳ ಸುರಿಯಬಹುದಿತ್ತು. ಆದರೆ ತನ್ನೂರಿ‌ನ ಕವಿಯ ಬಯೋಪಿಕ್ ಮಾಡಲು ಹೊರಟಿದ್ದಾರೆ. ನಾನು ಸ್ನೇಹಿತನಾಗಿ, ಸಿನಿಮಾರಂಗದವನಾಗಿ ಸದಾ ಜೊತೆಗಿರುತ್ತೇನೆ. ಒಂದೇ‌ ಒಂದು ರೂ ಸಂಭಾವನೆ ಪಡೆಯದೆ ತಂಡದೊಂದಿಗೆ ಮಹಾಕವಿ ಸಿನಿಮಾಕ್ಕಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.