ಕುಖ್ಯಾತ ಗ್ಯಾಂಗ್ಸ್ಟರ್ ಮುಕ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು: ಯುಪಿಯಾದ್ಯಂತ ಸೆಕ್ಷನ್ 144

Lucknow: ಉತ್ತರ ಪ್ರದೇಶದ (Uttar Pradesh) ಕುಖ್ಯಾತ ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿ (Mukthar Ansari Heart Attack) ಮುಕ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದು,

ಇದು ಸಹಜ ಸಾವಲ್ಲ, ನನ್ನ ತಂದೆಯನ್ನು ವಿಷ ನೀಡಿ ಸಾಯಿಸಲಾಗಿದೆ ಎಂದು ಮುಕ್ತಾರ್ ಅನ್ಸಾರಿ (Mukthar Ansari) ಪುತ್ರ ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ.

ಉತ್ತರ ಪ್ರದೇಶದ ಪೊಲೀಸ್ರ ಬಂಧನದಲ್ಲಿದ್ದ ಮುಕ್ತಾರ್ ಅನ್ಸಾರಿಗೆ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಬಂದಾದಲ್ಲಿರುವ ರಾಣಿ ದುರ್ಗಾವತಿ (Durgavathi) ವೈದ್ಯಕೀಯ ಆಸ್ಪತ್ರೆಗೆ

ಕರೆತರಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾದರು ಎಂದು ವೈದ್ಯ ಸುನೀಲ್ ಕೌಶಲ್ (Sunil Koushal) ತಿಳಿಸಿದ್ದಾರೆ. ಆದರೆ ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ, ತಮ್ಮ

ತಂದೆಗೆ ಆಹಾರದಲ್ಲಿ ವಿಷವನ್ನು ನೀಡಿದ್ದಾರೆ ಎಂದು ಆರೋಪಿಸಿ ಕುಟುಂಬವು ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮುಖ್ತಾರ್ ಅನ್ಸಾರಿಯನ್ನು ಜಿಲ್ಲಾ ಕಾರಾಗೃಹದಿಂದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಕರೆತರಲಾಯಿತು. ಆದರೆ ಕಾರಾಗೃಹ ಆಡಳಿತದ ಕಡೆಯಿಂದ ನನಗೆ

ಏನೂ ಹೇಳಿಲ್ಲ, ನನಗೆ ಮಾಧ್ಯಮಗಳ ಮೂಲಕ ವಿಷಯ ತಿಳಿದಿದೆ. ಆದರೆ ಈಗ ಇಡೀ ದೇಶಕ್ಕೆ ಎಲ್ಲವೂ ತಿಳಿದಿದೆ. ಎರಡು ದಿನಗಳ ಹಿಂದೆ ನಾನು ಅವರನ್ನು ಭೇಟಿ ಮಾಡಲು ಬಂದಿದ್ದೇ, ಆದರೆ ನನಗೆ ಕಾರಾಗೃಹದ

ಅಧಿಕಾರಿಗಳು ಭೇಡಿ ಮಾಡಲು (Mukthar Ansari Heart Attack) ಅವಕಾಶ ನೀಡಲಿಲ್ಲ.

ಸ್ಲೋ ಪಾಯ್ಸನ್ ನೀಡಿದ ಆರೋಪದ ಬಗ್ಗೆ ಈ ಹಿಂದೆಯೂ ಹೇಳಿದ್ದೆವು, ಇಂದೂ ಕೂಡ ಅದನ್ನೇ ಹೇಳುತ್ತೇವೆ. ಮಾರ್ಚ್ (March) 19ರಂದು ಭೋಜನದಲ್ಲಿ ವಿಷ ನೀಡಿದ್ದಾರೆ. ಹೀಗಾಗಿಯೇ ನನ್ನ ತಂದೆ

ಸಾವನ್ನಪ್ಪಿದ್ದಾರೆ. ಸರ್ಕಾರದ ವಿರುದ್ದ ನಾವು ನ್ಯಾಯಾಂಗದ ಮೊರೆ ಹೋಗುತ್ತೇವೆ. ನಮಗೆ ನ್ಯಾಯ ಸಿಗುತ್ತದೆ ಎಂದು ಸಂಪೂರ್ಣ ನಂಬಿಕೆ ಇದೆ ಎಂದು ಉಮರ್ ಅನ್ಸಾರಿ ಹೇಳಿದ್ದಾರೆ. ಮುಕ್ತಾರ್ ಅನ್ಸಾರಿ

ಅವರ ದೇಹವನ್ನು ಬಂಡಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮುಖ್ತಾರ್ ಅನ್ಸಾರಿ ವಿರುದ್ಧ 60ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ :
63 ವರ್ಷದ ಮುಖ್ತಾರ್ ಅನ್ಸಾರಿ ಅವರು ಮೌಸದರ್ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಅವರು 2005 ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್ನ ಜೈಲಿನಲ್ಲಿದ್ದರು. ಅವರ ವಿರುದ್ಧ 60 ಕ್ಕೂ

ಹೆಚ್ಚು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಉತ್ತರ ಪ್ರದೇಶದ (Uttar Pradesh) ವಿವಿಧ ನ್ಯಾಯಾಲಯಗಳಿಂದ ಸೆಪ್ಟೆಂಬರ್ 2022 ರಿಂದ ಎಂಟು ಪ್ರಕರಣಗಳಲ್ಲಿ ಮುಖ್ತಾರ್ ಅನ್ಸಾರಿ ಶಿಕ್ಷೆಗೆ ಗುರಿಯಾಗಿದ್ದರು.

ಯುಪಿಯಾದ್ಯಂತ ಸೆಕ್ಷನ್ 144 :
ಮುಖ್ತಾರ್ ಅನ್ಸಾರಿ ಸಾವಿನ ಹಿನ್ನಲೆ ಸಿಆರ್ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ರಾಜ್ಯಾದ್ಯಂತ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಬಂದಾ, ಮೌ, ಗಾಜಿಪುರ ಮತ್ತು ವಾರಣಾಸಿಯಲ್ಲಿ ಸ್ಥಳೀಯ ಪೊಲೀಸರೊಂದಿಗೆ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ತಂಡಗಳನ್ನು ನಿಯೋಜಿಸಲಾಗಿದೆ. ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದನ್ನು ಓದಿ: ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ ಎಚ್‌.ಡಿ. ಕುಮಾರಸ್ವಾಮಿ

Exit mobile version