ಆಮ್ ಆದ್ಮಿ ಪಕ್ಷಕ್ಕೆ ಜಿಗಿದ ಮುಖ್ಯಮಂತ್ರಿ ಚಂದ್ರು!

Mukyamanthri

ನಟ, ರಾಜಕಾರಣಿ(Politician) ಮುಖ್ಯಮಂತ್ರಿ ಚಂದ್ರು(Mukyamanthri Chandru) ಅವರು ಕಾಂಗ್ರೆಸ್(Congress) ತೊರೆದು ಆಮ್ ಆದ್ಮಿ ಪಕ್ಷಕ್ಕೆ(Aam Aadmi Party) ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಚಂದ್ರು ಅವರು ಕೆಲವು ದಿನಗಳ ಹಿಂದಷ್ಟೆ ಆಪ್ ಸೇರುವುದಾಗಿ ಸ್ಪಷ್ಟಪಡಿಸಿದ್ದರು. ಇನ್ನು ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‍ರಾವ್, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರ್, ಪಕ್ಷದ ವಕ್ತಾರ ಮತಾಯಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ನಾಯಕರು ಮುಖ್ಯಮಂತ್ರಿ ಚಂದ್ರು ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಇನ್ನು ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ತೊರೆದಿದ್ದರು. ಪಕ್ಷದಲ್ಲಿ ನನಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್‍ನಲ್ಲಿ ಬೆಲೆಯಿಲ್ಲ ಎಂದ ಆರೋಪಿಸಿ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದರು. ವಿಧಾನಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಈ ಬಾರಿಯೂ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಅವರು ಕಾಂಗ್ರೆಸ್ ತೊರೆದರು ಎನ್ನಲಾಗಿದೆ.

ಇನ್ನು ಈ ಹಿಂದೆ ಸಿದ್ದರಾಮಯ್ಯನವರು(Siddaramaiah) ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಮಂತ್ರಿ ಚಂದ್ರು ಅವರು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2008 ರಿಂದ 2014ರವರೆಗೆ ಕಾಂಗ್ರೆಸ್‍ನಿಂದ ವಿಧಾನಪರಿಷತ್(Vidhanaparishath) ಸದಸ್ಯರಾಗಿಯೂ ಆಯ್ಕೆಯಾಗಿದ್ದರು.

Exit mobile version