ಯಡಿಯೂರಪ್ಪಗೆ ಕೇಂದ್ರದ ನಾಯಕರ ಬಹುಪರಾಕ್: ಮಾಜಿ ಸಿಎಂ ಹಾಡಿಹೊಗಳಿದ ನರೇಂದ್ರ ಮೋದಿ & ಅಮಿತ್ ಶಾ

ಬೆಂಗಳೂರು, ಜು. 28: ಮುಖ್ಯಮಂತ್ರಿ ಸ್ಥಾನ ಪದತ್ಯಾಗ ಮಾಡಿದ ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಡಿ ಹೊಗಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ಪಕ್ಷ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಯಡಿಯೂರಪ್ಪ ಅವರು ನೀಡಿರುವ ಅದ್ಭುತ ಕೊಡುಗೆ ಸ್ಮರಿಸಲು ಪದಗಳೇ ಬರುತ್ತಿಲ್ಲ.ಹಲವು ದಶಕಗಳ ಕಾಲ ಕಷ್ಟಪಟ್ಟು ಹಾಗೂ ಕರ್ನಾಟಕ ಮೂಲೆ ಮೂಲೆಗಳಿಗೆ ಪ್ರಯಾಣ ಮಾಡಿದರು. ಸಮಾಜ ಕಲ್ಯಾಣಕ್ಕಾಗಿ ಯಡಿಯೂರಪ್ಪ ಬದ್ಧರಾಗಿರುವುದರಿಂದಲೇ ಅವರು ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ಅಮಿತ್ ಶಾ ಟ್ವೀಟ್ ಮಾಡಿ, ಯಡಿಯೂರಪ್ಪ ಪದತ್ಯಾಗವನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ. ಅತ್ಯಂತ ಭಕ್ತಿಯಿಂದ ಕರ್ನಾಟಕ ಜನ ಹಾಗೂ ಪಕ್ಷದ ಸೇವೆ ಮಾಡಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಬಲಗೊಳಿಸಲು ಕಠಿಣ ಕೆಲಸ ಹಾಗೂ ಕೊಡುಗೆಯಂತೂ ನಿಜಕ್ಕೂ ಸ್ಫೂರ್ತಿದಾಯಕ.ಅವರು ಪಕ್ಷ ಹಾಗೂ ಸರ್ಕಾರಕ್ಕೆ ಮಾರ್ಗದರ್ಶನ ಮುಂದುವರಿಸುವ ವಿಶ್ವಾಸವಿದೆ ಎಂದಿದ್ದಾರೆ.

ಇದೇ ವೇಳೆ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಸಿಎಂ ಅವರು ತಮ್ಮ ಅನುಭವ ಹಾಗೂ ಬುದ್ಧಿವಂತಿಕೆಯಿಂದ ರಾಜ್ಯದ ಬಡವರು ಮತ್ತು ರೈತರ ಸೇವೆ ಮಾಡುವ ಮೂಲಕ ಬಿಜೆಪಿಯನ್ನು ಮತ್ತಷ್ಟು ಬಲಪಡಿಸಲಿದ್ದಾರೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.