English English Kannada Kannada

ಭೀಕರ ರಸ್ತೆ ಅಪಘಾತ 3ಸಾವು

ರಸ್ತೆ ಅಪಘಾತ ತೀವ್ರವಾಗಿದ್ದು, ವಾಹನಗಳು ಒಂದರ ಮೇಲೊಂದು ನುಗ್ಗಿ ಸಂಪೂರ್ಣ ಜಖಂಗೊಂಡಿವೆ. ಅಪಘಾತದಲ್ಲಿ ಟ್ರಕ್ ಅಲ್ಲದೆ, ಕೆಲವು ನಾಲ್ಕು ಚಕ್ರದ ವಾಹನಗಳು ಸಹ ಜಖಂಗೊಂಡಿವೆ ಎಂದು ಹೇಳಲಾಗುತ್ತಿದೆ. ಅಪಘಾತದ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

 ಮುಂಬೈ ಅ 28 : ಮಹಾರಾಷ್ಟ್ರದ ಧುಲೆಯಲ್ಲಿ ಬುಧವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಳರಿಂದ ಎಂಟು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

ಸಂಪೂರ್ಣ ಜಖಂಗೊಂಡ ವಾಹನಗಳು:
ರಸ್ತೆ ಅಪಘಾತ ತೀವ್ರವಾಗಿದ್ದು, ವಾಹನಗಳು ಒಂದರ ಮೇಲೊಂದು ನುಗ್ಗಿ ಸಂಪೂರ್ಣ ಜಖಂಗೊಂಡಿವೆ. ಅಪಘಾತದಲ್ಲಿ ಟ್ರಕ್ ಅಲ್ಲದೆ, ಕೆಲವು ನಾಲ್ಕು ಚಕ್ರದ ವಾಹನಗಳು ಸಹ ಜಖಂಗೊಂಡಿವೆ ಎಂದು ಹೇಳಲಾಗುತ್ತಿದೆ. ಅಪಘಾತದ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

ವಾಹನಗಳ ಮಧ್ಯೆ ಸಿಲುಕಿದ್ದ ಹಲವರು:
ಶಿರ್ಪುರ ತಾಲೂಕಿನ ಪಲಾಸ್ನೇರ್ ಪ್ರದೇಶದಲ್ಲಿ ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ, ಇನ್ನೂ ಅನೇಕ ಜನರು ವಾಹನಗಳಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ವಾಹನಗಳಿಂದ ಹೊರತರಲು ಆಡಳಿತವು ಸಾಕಷ್ಟು ಹರಸಾಹಸ ಪಡಬೇಕಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ನಂತರ ಪೊಲೀಸ್ ತಂಡ ಮತ್ತು ಆಂಬ್ಯುಲೆನ್ಸ್ ಕೂಡ ತಕ್ಷಣವೇ ಸ್ಥಳಕ್ಕೆ ಧಾವಿಸಿ  ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp

Submit Your Article