Arrest of Munirat again: BJP MLA Munirat arrested again
Muniratna Arrest: ಗುತ್ತಿಗೆದಾರನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ (BJP) ಶಾಸಕ ಮುನಿರತ್ನ (Muniratna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು (Kaggalipura Police Station) ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, 2020 ರಿಂದ 2022 ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ (Rajarajeshwari Nagar) 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ
ಜೈಲು ಸೇರಿದ್ದ ಮುನಿರತ್ನ
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್ (Chaluvaraj) ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದವು.
ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ (Andrapradesh) ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ (Honeytrap) ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ