ನವದೆಹಲಿ, ಡಿ. 08: ಮುಂದಿನ ಮೂರು ವರ್ಷಗಳಲ್ಲಿ ಭಾರತದ ಎಲ್ಲಾ ಗ್ರಾಮಗಳಿಗೆ ಅಧಿಕ ವೇಗದ ಫೈಬರ್ ಡಾಟಾ ಇಂಟರ್ನೆಟ್ ಸಂಪರ್ಕ ಸೇವೆಯನ್ನು ಒದಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಭಾರತೀಯ ಮೊಬೈಲ್ ಕಾಂಗ್ರೆಸ್(ಐಎಂಸಿ)2020ನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೂರು ವರ್ಷಗಳಲ್ಲಿ ದೇಶದ ಪ್ರತಿ ಹಳ್ಳಿಗೆ ಅಧಿಕ ವೇಗದ ಫೈಬರ್ ಆಪ್ಟಿಕ್ ಡಾಟಾ ಸಂಪರ್ಕ ಸೇವೆಯನ್ನು ಒದಗಿಸಲಾಗುವುದು ಎಂದರು.
ಮೊಬೈಲ್ ಉತ್ಪಾದನೆಯಲ್ಲಿ ಭಾರತ ದೇಶ ಅತ್ಯಂತ ಪ್ರಶಸ್ತನೀಯ ಸ್ಥಳವಾಗಿ ಉದಯವಾಗುತ್ತಿದ್ದು, ಭಾರತದ ಡಿಜಿಟಲ್ ತಂತ್ರಜ್ಞಾನ ವೇಗವಾಗಿ ಬೇಳೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನಾವು ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪವನ್ನು ಫೈಬರ್ ಆಪ್ಟಿಕ್ ಕೇಬಲ್ ನೊಂದಿಗೆ ಜೋಡಿಸಿದ್ದೇವೆ. ದೇಶದ ಹಲವು ಜಿಲ್ಲೆಗಳಲ್ಲಿ, ಈಶಾನ್ಯ ರಾಜ್ಯಗಳಲ್ಲಿ, ಲಕ್ಷದ್ವೀಪಗಳಲ್ಲಿ, ಫಿಕ್ಸ್ ಲೈನ್ ಬ್ರಾಡ್ ಬಾಂಡ್ ಸೇವೆಗಳನ್ನು ಮತ್ತು ಸಾರ್ವಜನಿಕ ವೈಫೈ ಹಾಟ್ ಸ್ಪಾಟ್ ಗಳನ್ನು ನೀಡಲು ಸರ್ಕಾರ ಉತ್ಸುಕವಾಗಿದೆ ಎಂದಿದ್ದಾರೆ.